Home Sidlaghatta ಸ್ವಾತಂತ್ರ್ಯ ಧ್ವಜಾರೋಹಣ ಕಾರ್ಯಕ್ರಮ

ಸ್ವಾತಂತ್ರ್ಯ ಧ್ವಜಾರೋಹಣ ಕಾರ್ಯಕ್ರಮ

0
227

Sidlaghatta : ಶಿಡ್ಲಘಟ್ಟ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಗಸ್ಟ್ 14 ರ ಮಧ್ಯರಾತ್ರಿ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ 77 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ತಹಶೀಲ್ದಾರ್ ಬಿ.ಎನ್.ಸ್ವಾಮಿ ಅವರು ಮಾತನಾಡಿದರು.

ಈ 77 ನೇ ಸ್ವಾತಂತ್ರ್ಯ ದಿನವು ನಮ್ಮೆಲ್ಲರಲ್ಲೂ ಸಹೋದರತೆ, ಸಮಾನತೆಯ ಭಾವನೆಯನ್ನು ಹೆಚ್ಚಿಸುವುದರೊಂದಿಗೆ ಎಲ್ಲ ರಂಗಗಳಲ್ಲೂ ಅಭಿವೃದ್ದಿ ಸಾಧಿಸುವಂತಾಗಬೇಕೆಂದು ತಿಳಿಸಿದರು.

ನಮ್ಮ ನಮ್ಮಲ್ಲಿನ ಧ್ವೇಷ, ಮತ್ಸರಗಳೆ ಬ್ರಿಟೀಷರು ನಮ್ಮನ್ನು ವರ್ಷಗಳ ಕಾಲ ಆಳಲು ಕಾರಣವಾಯಿತು. ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಂದ ನಾವು ಸ್ವತಂತ್ರ್ಯಗೊಂಡಿದ್ದೆವೆ. ನಮ್ಮದೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಟ್ಟಿಕೊಂಡಿದ್ದೇವೆ ಎಂದರು.

ಇಂದಿನ ವಿದ್ಯಾರ್ಥಿ ಯುವಜನರು ಈ ದೇಶದ ಇತಿಹಾಸವನ್ನು ತಿಳಿದುಕೊಂಡು, ಉತ್ತಮ ಶಿಕ್ಷಣ ಪಡೆದು ಉತ್ತಮ ಬದುಕನ್ನು ಕಟ್ಟಿಕೊಂಡು ಹುಟ್ಟಿದ ಊರು, ಹೆತ್ತವರು ಹಾಗೂ ಈ ದೇಶ ನಾಡಿಗೆ ಒಳ್ಳೆಯ ಹೆಸರನ್ನು ತಂದುಕೊಡಬೇಕೆಂದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ, ನೆನಪಿನ ಕಾಣಿಕೆ, ನಗದು ಹಣವನ್ನು ನೀಡಿ ಸತ್ಕರಿಸಲಾಯಿತು. ತಾಲೂಕಿನ ಸೈನಿಕರನ್ನು ಹಾಗೂ ಅವರ ಕುಟುಂಬದವರನ್ನು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸದಸ್ಯರನ್ನು ಸನ್ಮಾನಿಸಲಾಯಿತು.

ಮಾಜಿ ಶಾಸಕ ಎಂ.ರಾಜಣ್ಣ, ನಗರಸಭೆ ಅಧ್ಯಕ್ಷೆ ಸುಮಿತ್ರರಮೇಶ್, ಕೆಎಂಎಫ್ ನಿರ್ದೆಶಕ ಆರ್.ಶ್ರೀನಿವಾಸ್‌ರಾಮಯ್ಯ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾರಾಜೀವ್‌ಗೌಡ, ಬಿಜೆಪಿ ಯುವ ಮುಖಂಡ ಆನಂದ್‌ಗೌಡ, ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್, ಡಾ.ಸತ್ಯನಾರಾಯಣರಾವ್ ಮಾತನಾಡಿದರು.

ಜನಪದ ಗಾಯಕ ದೇವರಮಳ್ಳೂರು ಮಹೇಶ್ ಮತ್ತವರ ತಂಡದಿಂದ ದೇಶ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ನಡೆಸಿಕೊಡುವಾಗ, ಕಲಾವಿದ ಶಿಕ್ಷಕ ನಾಗರಾಜ್ ಅವರು ಭಾರತದ ಭೂಪುಟ, ಭಾರತಾಂಬೆಯ ಚಿತ್ರ ಬರೆದು ಸಭಿಕರ ಗಮನ ಸೆಳೆದರು.

ಪತ್ರಕರ್ತರ ಸಂಘದ ಅಧ್ಯಕ್ಷ ವೀರಾಪುರ ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ಬಿಜೆಪಿ ಯುವ ಮುಖಂಡ ಆನಂದ್‌ಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ಬಿಜೆಪಿ ತಾಲೂಕು ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಸರ್ಕಾರಿ ನೌಕರರ ಸಂಘದ ಕೆ.ಎನ್.ಸುಬ್ಬಾರೆಡ್ಡಿ, ಬಿ.ನಾರಾಯಣಸ್ವಾಮಿ, ತಿಮ್ಮನಾಯಕನಹಳ್ಳಿ ಅರುಣ್ ಕುಮಾರ್, ರವಿಪ್ರಕಾಶ್, ಆನೂರು ದೇವರಾಜ್, ಪತ್ರಕರ್ತರ ಸಂಘದ ಎಲ್ಲ ಪದಾಧಿಕಾರಿಗಳು ಹಾಜರಿದ್ದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!