Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಎಲ್ಲಾ ತಾಲ್ಲೂಕು ಕೇಂದ್ರ ಹಾಗೂ ಪಂಚಾಯಿತಿಗಳಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day) ಬಹಳ ಅದ್ಧೂರಿಯಾಗಿ ಆಚರಿಸಲಾಯಿತು. ವಿವಿಧ ಶಾಲಾ, ಕಾಲೇಜುಗಳು, ಸರ್ಕಾರಿ ಕಚೇರಿಗಳು, ಸಂಘ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನದ ಕಾರ್ಯಕ್ರಮಗಳು ಜರುಗಿದವು.
ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ (M. T. B. Nagaraj) ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ 4, ಗೃಹ ಮತ್ತು ಅರಣ್ಯ ಇಲಾಖೆಯ ತಲಾ ಒಂದು ತಂಡ ಹಾಗೂ ಶಿಕ್ಷಣ ಇಲಾಖೆಯ 11 ತಂಡಗಳು ಕವಾಯತು ನಡೆಸಿದವು.
ಚಿಂತಾಮಣಿ
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಚಿಂತಾಮಣಿ (Chintamani) ನಗರದ ಝಾನ್ಸಿ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರೋತ್ಸವದಲ್ಲಿ ಶಾಸಕ ಎಂ.ಕೃಷ್ಣಾರೆಡ್ಡಿ (M Krishna Reddy) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ನಡೆಸಿದರು.
ಶಿಡ್ಲಘಟ್ಟ
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಿಡ್ಲಘಟ್ಟ (Sidlaghatta) ನಗರದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಸಕ ವಿ.ಮುನಿಯಪ್ಪ (V Muniyappa) ಧ್ವಜಾರೋಹಣ ನಡೆಸಿದರು.
ಗುಡಿಬಂಡೆ
ಗುಡಿಬಂಡೆ (Gudibande) ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ (S N Subba Reddy) ಧ್ವಜವಂದನೆ ಸ್ವೀಕರಿಸಿದರು.
ಗೌರಿಬಿದನೂರು
ಗೌರಿಬಿದನೂರು (Gauribidanur) ನಗರದ ಹೊರವಲಯದಲ್ಲಿರುವ ನೇತಾಜಿ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಹಶೀಲ್ದಾರ್ ಎಚ್.ಶ್ರೀನಿವಾಸ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ಎನ್.ಎಚ್.ಶಿವಶಂಕರರೆಡ್ಡಿ (N H Shivashankar Reddy) ಧ್ವಜವಂದನೆ ಸ್ವೀಕರಿಸಿದರು.
ಬಾಗೇಪಲ್ಲಿ
ಬಾಗೇಪಲ್ಲಿ (Bagepalli) BJP ಮಹಿಳಾ ಮೋರ್ಚಾದ ಸದಸ್ಯರು ಪಟ್ಟಣದ ನೇತಾಜಿ ವೃತ್ತದಲ್ಲಿ ಭಾನುವಾರ ಮಧ್ಯರಾತ್ರಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಿದರು.
ಬಾಗೇಪಲ್ಲಿ ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸೋಮವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಧ್ವಜವಂದನೆ ಸ್ವೀಕರಿಸಿದರು.