Chikkaballapur : ಚಿಕ್ಕಬಳ್ಳಾಪುರ ನಗರ ಹಾಗೂ ಜಿಲ್ಲೆಯಾದ್ಯಂತ ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಯೋಗಾಭ್ಯಾಸ ಮಾಡುವ ಮುಖೇನ 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು (International Day Of Yoga) ಮಾಡಿದರು.
ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ.ಸುಧಾಕರ್ ಉದ್ಘಾಟಿಸಿ “ಮನುಷ್ಯನ ಮನಸ್ಸು ಮತ್ತು ದೇಹ ಆರೋಗ್ಯವಾಗಿರಬೇಕಾದರೆ ದೇಹ ದಂಡನೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಜಿ.ಸಂತೋಷ್ ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ತಬೀಬಾ ಬಾನು, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಹರೀಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಾಮೂಹಿಕ ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.
ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಗಲಗುರ್ಕಿಯ ಬಿಜಿಎಸ್ ಇಂಗ್ಲಿಷ್ ಶಾಲೆಯಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಾವಿರಾರು ವಿದ್ಯಾರ್ಥಿಗಳು ಯೋಗಾಸನ ಮಾಡಿದರು.
ಚೇಳೂರು
ಚೇಳೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ಬುಧವಾರ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಬಾಗೇಪಲ್ಲಿ
ಬಾಗೇಪಲ್ಲಿ ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾವರಣದಲ್ಲಿ ಬುಧವಾರ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಪಟುಗಳು, ಸರ್ಕಾರಿ ನೌಕರರು, ಶಾಲಾ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಯೋಗ ಪ್ರದರ್ಶನ ನಡೆಸಿದರು.