Home Chikkaballapur Chikkaballapur ಜಿಲ್ಲೆಯಾದ್ಯಂತ ವಿಶ್ವ ಯೋಗ ದಿನಾಚರಣೆ

Chikkaballapur ಜಿಲ್ಲೆಯಾದ್ಯಂತ ವಿಶ್ವ ಯೋಗ ದಿನಾಚರಣೆ

0

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮಂಗಳವಾರ ವಿವಿಧ ಶಾಲಾ, ಕಾಲೇಜುಗಳು, ಸಂಘ ಸಂಸ್ಥೆಗಳು ವಿಶ್ವ ಯೋಗ ದಿನಾಚರಣೆ (International Yoga Day) ನಡೆಸಿದವು.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಕ್ರೀಡಾ ಇಲಾಖೆ, NSS ಘಟಕ, NCC ಘಟಕದ ಸಹಯೋಗದಲ್ಲಿ ತಾಲ್ಲೂಕಿನ ನಂದಿ (Nandi) ಗ್ರಾಮದ ಭೋಗನಂದೀಶ್ವರ ದೇವಾಲಯ (Shree Bhoga Nandishwara Temple) ದ ಆವರಣದಲ್ಲಿ 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ (M. T. B. Nagaraj), ಜಿಲ್ಲಾಧಿಕಾರಿ ಆರ್.ಲತಾ, ರಾಜ್ಯ ಮಾವು ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ. ನಾಗರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್. ಕಬಾಡೆ, ಜಿಲ್ಲಾ ಆಯುಷ್ ಅಧಿಕಾರಿ ತಬೀಬ ಬಾನು, ಪತಂಜಲಿ ಯೋಗ ಶಿಕ್ಷಣ ಸಮಿತಿ ಜಿಲ್ಲಾ ಶಾಖೆಯ ರಾಮಕೃಷ್ಣ ರೆಡ್ಡಿ, ರತ್ನವರ್ಮ, ನಾಗರಾಜ್, ಸುಧಾ ಮತ್ತಿತರರು ಉಪಸ್ಥಿತರಿದ್ದರು.

ಗೌರಿಬಿದನೂರು

Gowribidanur international Yoga day

ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಪತಂಜಲಿ ಯೋಗ ಶಿಕ್ಷಣ ಸಹಯೋಗದಲ್ಲಿ ತಾಲ್ಲೂಕಿನ ವಿದುರಾಶ್ವತ್ಥದಲ್ಲಿ ವಿಶ್ವ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಸಕ ಎನ್‌.ಎಚ್.ಶಿವಶಂಕರರೆಡ್ಡಿ (N.H. ShivaShankar Reddy), ತಹಶೀಲ್ದಾರ್ ಎಚ್.ಶ್ರೀನಿವಾಸ್ , ಪತಂಜಲಿ ಯೋಗ ಶಿಕ್ಷಣದ ಅಧ್ಯಕ್ಷ ಎ.ಎನ್.ಕೃಷ್ಣಮೂರ್ತಿ, ಸಂಚಾಲಕ ಚಿಕ್ಕನರಸಿಂಹಯ್ಯ, ತಾ.ಪಂ ಇಒ ಆರ್.ಹರೀಶ್, ಗ್ರಾ.ಪಂ ಅಧ್ಯಕ್ಷೆ ಕೆ.ಆರ್.ಮನುಜ, ಬಿಇಒ ಕೆ.ವಿ.ಶ್ರೀನಿವಾಸಮೂರ್ತಿ, ಮರಿರಾಜು, ಓ.ರತ್ನಮ್ಮ, ಡಾ.ಅವಿನಾಶ್ ಭಾಗವಹಿಸಿದರು.

ಶಿಡ್ಲಘಟ್ಟ

ಶಿಡ್ಲಘಟ್ಟ (Sidlaghatta) ನಗರದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ತಾಲ್ಲೂಕು ಆಡಳಿತ, ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆಅಂಗವಾಗಿ ಯೋಗಾಸನ ಮಾಡಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಿ.ಎಸ್.ರಾಜೀವ್, ತಾಲ್ಲೂಕು ಪಂಚಾಯಿತಿ ಇಒ ಮುನಿರಾಜು, ತಾಲ್ಲುಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸಿಡಿಪಿಒ ನವತಾಜ್, ಪ್ರಾಂಶುಪಾಲ ಶಿವಲಿಂಗೇಗೌಡ, ಮುಖ್ಯ ಶಿಕ್ಷಕಿ ಮಂಜುಳಾ, ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.

ಚಿಂತಾಮಣಿ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ಆಯುಷ್ ಇಲಾಖೆ, ಪತಂಜಲಿ ಯೋಗ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಸಿಸಿ ಘಟಕಗಳ ಸಹಯೋಗದೊಂದಿಗೆ ಚಿಂತಾಮಣಿ ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಕೈವಾರದ ಯೋಗಿ ನಾರೇಯಣ ಮಠದ ಆವರಣದಲ್ಲಿ ಮಂಗಳವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಸಕ ಎಂ.ಕೃಷ್ಣಾರೆಡ್ಡಿ, ತಹಶೀಲಾರ್ ಮುನಿಶಾಮಿರೆಡ್ಡಿ, ಪ್ರವಚನಕಾರ ತಳಗವಾರ ಆನಂದ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ, ಕೈವಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ, ಮುಖಂಡ ಬನಹಳ್ಳಿ ರವಿ, ಕೈವಾರ ಮಠದ ವ್ಯವಸ್ಥಾಪಕ ಕೆ.ಲಕ್ಷ್ಮಿನಾರಾಯಣ್, ತಾಲ್ಲೂಕು ಆರೋಗ್ಯಾಧಿ ಡಾ.ಸ್ವಾತಿ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಅಧ್ಯಕ್ಷ ನಾರಾಯಣಪ್ಪ, ಯೋಗ ಶಿಕ್ಷಕಿ ಸ್ವರ್ಣಗೌರಿ ಪಾಲ್ಗೊಂಡಿದ್ದರು.

ಬಾಗೇಪಲ್ಲಿ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲ್ಲೂಕು ಆಡಳಿತ ಹಾಗೂ ಯೋಗಸಮಿತಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಯೋಗಪಟುಗಳು ಹಾಗೂ ಸರ್ಕಾರಿ ಶಾಲೆಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬಾಗೇಪಲ್ಲಿ ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾವರಣದಲ್ಲಿ ಮಂಗಳವಾರ ಯೋಗ ಅಭ್ಯಾಸ ಮಾಡಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಜೆ.ರಂಗಸ್ವಾಮಿ, ತಹಶೀಲ್ದಾರ್ ವೈ.ರವಿ, ತಾಲ್ಲೂಕು ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಚಿನ್ನಕೈವಾರಮಯ್ಯ, ಎಸ್.ಸಿದ್ದಪ್ಪ, ಆರ್.ವೆಂಕಟರಾಮ್, ಸ್ವರೂಪರಾಣಿ, ಬಿ.ಆರ್.ನರಸಿಂಹನಾಯ್ಡು, ಸದಸ್ಯೆ ಸುಜಾತಾ೦ನಾಯ್ಡು, ಆರ್.ಹನುಮಂತರೆಡ್ಡಿ, ಯೋಗ ಶಿಕ್ಷಕ ಟಿ.ರಘುನಾಥರೆಡ್ಡಿ, ನಾರಾಯಣಸ್ವಾಮಿ, ಸನತ್, ಭೂದೇವಿ, ರಾಮಚಂದ್ರ, ಮುನಿರಾಮಯ್ಯ, ಮುನಿರಾಜು ಪಾಲ್ಗೊಂಡಿದ್ದರು .

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version