Home News Chikkaballapur ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ

ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ

0
Chikkaballapur janaspandana program

Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ (Janaspandana) ಹಮ್ಮಿಕೊಳ್ಳಲಾಗಿತ್ತು.

ಜನಸ್ಪಂದನದಲ್ಲಿ 40 ಕಂದಾಯ ಇಲಾಖೆ, 10 ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಒಂದು ಬೆಸ್ಕಾಂ ಮತ್ತು ಒಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ಗೆ ಸಂಬಂಧಿಸಿದ ಒಟ್ಟು 52 ಅರ್ಜಿಗಳು ಸ್ವೀಕೃತವಾಗಿದೆ. ಸ್ವೀಕೃತವಾಗಿರುವ ಅರ್ಜಿಗಳನ್ನು ‌ನಿಗದಿತ ಕಾಲಮಿತಿಯೊಳಗೆ ಕಡ್ಡಾಯ ವಾಗಿ ಇತ್ಯರ್ಥಪಡಿಸಿ ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ತಹಶೀಲ್ದಾರ್ ಅನಿಲ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥ್, ಡಿವೈಎಸ್‌ಪಿ ಶಿವಕುಮಾರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version