19.5 C
Bengaluru
Sunday, March 1, 2026

ಜಂಗಮಕೋಟೆ ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

- Advertisement -
- Advertisement -

Jangamakote, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಸುಜಾತ ನರಸಿಂಹಯ್ಯ ಹಾಗೂ ಉಪಾಧ್ಯಕ್ಷರಾಗಿ ನಾರಾಯಣಮ್ಮ ನಾಗರಾಜ ಆಯ್ಕೆಯಾಗಿದ್ದಾರೆ.

ತಾಲ್ಲೂಕಿನ ಜಂಗಮಕೋಟೆ ಗ್ರಾಮಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಎ (ಮಹಿಳೆ) ವರ್ಗಕ್ಕೆ ಮೀಸಲಾಗಿತ್ತು.

ಅಧ್ಯಕ್ಷಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಸುಜಾತ ನರಸಿಂಹಮೂರ್ತಿ ಮತ್ತು ಕಾಂಗ್ರೆಸ್ ಬೆಂಬಲಿತ ಮಂಜುಳಮ್ಮ ನಾಮಪತ್ರ ಸಲ್ಲಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ನಾರಾಯಣಮ್ಮ ಮತ್ತು ಕಾಂಗ್ರೆಸ್ ಬೆಂಬಲಿತ ಸುಮಾ ರಾಜೇಶ್ ನಾಮಪತ್ರ ಸಲ್ಲಿಸಿದ್ದರು.

ಅಧ್ಯಕ್ಷ ಸ್ಥಾನದ ಜೆಡಿಎಸ್ ಬೆಂಬಲಿತ ಸುಜಾತ ನರಸಿಂಹಯ್ಯ 10 ಮತಗಳನ್ನು ಪಡೆದರೆ ಕಾಂಗ್ರೆಸ್ ಬೆಂಬಲಿತ ಮಂಜುಳಮ್ಮ 7 ಮತಗಳನ್ನು ಪಡೆದು ಪರಾಭವಗೊಂಡರು. ಉಪಾಧ್ಯಕ್ಷ ಸ್ಥಾನದ ಜೆಡಿಎಸ್ ಬೆಂಬಲಿತ ನಾರಾಯಣಮ್ಮ ನಾಗರಾಜ್ 10 ಮತಗಳನ್ನು ಪಡೆದರೆ ಕಾಂಗ್ರೆಸ್ ಬೆಂಬಲಿತ ಸುಮಾ ರಾಜೇಶ್ 7 ಮತಗಳನ್ನು ಪಡೆಯುವ ಮೂಲಕ ಪರಾಭವಗೊಂಡರು.

ತಲಾ 10 ಮತಗಳನ್ನು ಪಡೆದುಕೊಂಡ ಜೆಡಿಎಸ್ ಬೆಂಬಲಿತ ಸುಜಾತ ನರಸಿಂಹಯ್ಯ ಅಧ್ಯಕ್ಷರಾಗಿ ಹಾಗು ಉಪಾಧ್ಯಕ್ಷರಾಗಿ ನಾರಾಯಣಮ್ಮ ನಾಗರಾಜ ಈ ಇಬ್ಬರ ಆಯ್ಕೆಯನ್ನು ಚುನಾವಣಾಧಿಕಾರಿ ತಹಶೀಲ್ದಾರ್ ಬಿ.ಎನ್.ಸ್ವಾಮಿ ಘೋಷಿಸಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!