Jangamakote, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ರೇಷ್ಮೆ ಬೆಳೆಗಾರರ ಮತ್ತು ರೈತರ ಸೇವಾ ಸಹಕಾರ ಸಂಘದ (SFCS) ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಮ್ಮ JDS ಪಕ್ಷದ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.
ಸಂಘದ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಾಲಗಾರರ ಕ್ಷೇತ್ರದಿಂದ ಸಾಮಾನ್ಯ ಆಂಜಿನಪ್ಪ.ಟಿ, ನಾಗರಾಜ.ಎಂ, ಗೋಪಾಲ್.ಎ, ಮುನಿರಾಜು.ಕೆ.ಎನ್, ಸಾಲಗಾರರಲ್ಲದ ಕ್ಷೇತ್ರದಿಂದ ಸಾಮಾನ್ಯ ಮಂಜುನಾಥ.ವಿ, ಠೇವಣಿದಾರರ ಕ್ಷೇತ್ರದಿಂದ ಮಧುಕುಮಾರ್.ಜೆ.ಕೆ, ಹಿಂದುಳಿದ ವರ್ಗ ಮೀಸಲು ಪ್ರವರ್ಗ ಎ ದಿಂದ ಆಂಜಿನಪ್ಪ, ಪ್ರವರ್ಗ ಬಿ ಯಿಂದ ರಾಮಕೃಷ್ಣಪ್ಪ.ಎನ್, ಪರಿಶಿಷ್ಟ ಜಾತಿ ಮೀಸಲಿನಲ್ಲಿ ಚೌಡಪ್ಪ.ಬಿ.ಎಂ, ಪರಿಶಿಷ್ಠ ಪಂಗಡ ಮೀಸಲಿನಲ್ಲಿ ವೆಂಕಟೇಶ್.ಜೆ.ಎಂ, ಹಾಗು ಮಹಿಳಾ ಮೀಸಲು ಸ್ಥಾನಗಳಿಗೆ ರೂಪ ಹಾಗು ಎಂ.ಮಂಜುಳಾ ಅವರು ಮುಂದಿನ ಐದು ವರ್ಷದ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ವಿಜೇತರನ್ನು ಅಭಿನಂದಿಸಿದ ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಮಾತನಾಡಿ, “ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೆಡಿಎಸ್ ಬೆಂಬಲಿತರು ಸಂಘದ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ವೈಯುಕ್ತಿಕವಾಗಿ ಅತ್ಯಂತ ಸಂತಸವನ್ನುಂಟುಮಾಡಿದೆ. ನಮ್ಮ ಪಕ್ಷದ ಕಾರ್ಯಕರ್ತರ ಸಾಂಘಿಕ ಹೋರಾಟದಿಂದ ಈ ಅಭೂತಪೂರ್ವ ಗೆಲುವು ಸಾಧ್ಯವಾಗಿದೆ. ಗೆಲುವಿಗೆ ಸಹಕರಿಸಿದ ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರಿಗೆ, ಮುಖಂಡರಿಗೆ ಮತ್ತು ಮತದಾರ ಬಂಧುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ಗೆಲುವು ನಮ್ಮ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ್ದು ಮುಂದಿನ ದಿನಗಳಲ್ಲಿ ತಾಲ್ಲೂಕಿನಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು ಸಹಕಾರಿಯಾಗುತ್ತದೆ” ಎಂದು ಹೇಳಿದರು.