ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಬಚ್ಚೇಗೌಡ

- Advertisement -
- Advertisement -

Chikkaballapur : ಭಾನುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ (K P Bacchegowda) ಕಾಂಗ್ರೆಸ್ (Congress Join) ಸೇರಿದರು.

ದೇವೇಗೌಡರ ಕುಟುಂಬಕ್ಕೆ ಆಪ್ತರಾಗಿದ್ದ ಬಚ್ಚೇಗೌಡ ಅವರು 2008ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. 2013, 2018 ಮತ್ತು 2023ರ ಚುನಾವಣೆಯಲ್ಲಿ ಜೆಡಿಎಸ್ ನಿಂದ ಕಣಕ್ಕೆ ಇಳಿದು ಪರಾಭವಗೊಂಡಿದ್ದರು.

ಬಚ್ಚೇಗೌಡ ಅವರ ಜೊತೆಗೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುನೇಗೌಡ, ಜಿ.ಪಂ ಮಾಜಿ ಸದಸ್ಯ ಕೆ.ಸಿ.ರಾಜಾಕಾಂತ್, ಅಂಗರೇಖನಹಳ್ಳಿ ರವಿಕುಮಾರ್ ಮತ್ತಿತರರು ಕಾಂಗ್ರೆಸ್ ಸೇರ್ಪಡೆಯಾದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಸಚಿವ ಬೈರತಿ ಸುರೇಶ್, ಶಾಸಕ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ, ಎಂ.ಆರ್.ಸೀತಾರಾಮ್ ಮತ್ತಿತರರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!