Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಆವಲಗುರ್ಕಿ, ತಿಪ್ಪೇನಹಳ್ಳಿ ಮತ್ತಿತರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ BJP JDS ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪ್ರಚಾರ (K Sudhakar Campaign) ನಡೆಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಡಾ.ಕೆ.ಸುಧಾಕರ್ “ಕಾಂಗ್ರೆಸ್‌ಗೆ ಮತ ನೀಡಿದ್ದಕ್ಕೆ ಕಳೆದ 10 ತಿಂಗಳಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದು ಲೋಕಸಭಾ ಚುನಾವಣೆಯಲ್ಲೂ ಜನರು ಕಾಂಗ್ರೆಸ್‌ಗೆ ಮತ ಹಾಕಿದರೆ ಕಷ್ಟ ದುಪ್ಪಟ್ಟಾಗುತ್ತದೆ. ಉತ್ತಮ ಜೀವನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ ನೀಡಬೇಕು. ಕಾಶ್ಮೀರದಲ್ಲಿ ಮೊದಲು ಕಲ್ಲು ಬಿಸಾಡುವಂತೆ ಬಾಂಬ್ ಎಸೆಯುತ್ತಿದ್ದರು. ಆದರೆ ಕಳೆದ ಹತ್ತು ವರ್ಷಗಳಲ್ಲಿ ಬಾಂಬ್‌ನ ಶಬ್ಧ ಕೂಡ ಕೇಳಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಬೆಂಗಳೂರಿನಲ್ಲಿ ಬಾಂಬ್ ಸಿಡಿದಿದೆ. ಪ್ರಧಾನಿ ಮೋದಿ ಬಡವರ ಪರವಾಗಿ ಚಿಂತಿಸುತ್ತಿದ್ದು ₹ 10 ಕೋಟಿ ಅಡುಗೆ ಅನಿಲ ಸಂಪರ್ಕ ನೀಡಿದ್ದಾರೆ. ಮಹಿಳೆಯರು ದೂರದ ಕೆರೆ, ಬಾವಿಯಿಂದ ನೀರು ತರಬಾರದು ಎಂದು ಜಲಜೀವನ್ ಮಿಷನ್‌ನಡಿ ಕೊಳಾಯಿ ನೀರು ನೀಡಿದ್ದಾರೆ. ಕಿಸಾನ್ ಸಮ್ಮಾನ್‌ನಡಿ ರೈತರಿಗೆ ಹಣ ನೀಡಿದ್ದಾರೆ” ಎಂದು ತಿಳಿಸಿದರು.
ಪ್ರಚಾರ ಸಂಧರ್ಭದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲಕುಂಟಹಳ್ಳಿ ಮುನಿಯಪ್ಪ, ಕೆ.ವಿ.ನಾಗರಾಜ್ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪದಾಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು.