Home News Chikkaballapur ಜಿಲ್ಲೆಯಾದ್ಯಂತ ಕನಕದಾಸ ಜಯಂತಿ ಆಚರಣೆ

ಜಿಲ್ಲೆಯಾದ್ಯಂತ ಕನಕದಾಸ ಜಯಂತಿ ಆಚರಣೆ

0
379
Kanakadasa Jayanthi Chickballapur

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ದಾಸಶ್ರೇಷ್ಠ ಕನಕದಾಸರ 537ನೇ ಜಯಂತಿಯನ್ನು (Kanakadasa Jayanthi) ಅದ್ಧೂರಿಯಾಗಿ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕುರುಬರ ಸಂಘದಿಂದ ಸೋಮವಾರ ನಗರದಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ ಸುಧಾಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಿಡ್ಲಘಟ್ಟ:

Kanakadasa Jayanthi Sidlaghatta

ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನಕದಾಸರ ಜಯಂತ್ಯುತ್ಸವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಗೌರಿಬಿದನೂರು:

Kanakadasa Jayanthi Gauribidanur

ಗೌರಿಬಿದನೂರು ನಗರದ ಮಿನಿ ವಿಧಾನ ಸೌಧದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ಸಾಧಕರನ್ನು ಸನ್ಮಾನಿಸಿದರು.

ಚಿಂತಾಮಣಿ:

Kanakadasa Jayanthi Chintamani

ಚಿಂತಾಮಣಿ ನಗರದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ, ಹಿಂದುಳಿದ ವರ್ಗಗಳ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರುಬ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಸೋಮವಾರ ಕನಕದಾಸ ಜಯಂತಿ ಆಚರಿಸಲಾಯಿತು.

ಚೇಳೂರು:

Kanakadasa Jayanthi Chelur

ಚೇಳೂರು ಪಟ್ಟಣದ ತಾಲ್ಲೂಕು ಕಚೇರಿ ಸೇರಿದಂತೆ ತಾಲ್ಲೂಕಿನಾದ್ಯಂತ ಗ್ರಾಮ ಪಂಚಾಯಿತಿ ಮತ್ತು ಶಾಲಾ–ಕಾಲೇಜುಗಳಲ್ಲಿ ಸರಳವಾಗಿ ಕನಕದಾಸ ಜಯಂತಿ ಆಚರಿಸಲಾಯಿತು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!