Chikkaballapur : ಭಾನುವಾರ ಚಿಕ್ಕಬಳ್ಳಾಪುರ ನಗರವನ್ನು ಪ್ರವೇಶಿಸಿದ ಕನ್ನಡ ಜ್ಯೋತಿ ರಥಯಾತ್ರೆಕ್ಕೆ (Kannada Jyothi Ratha) ನಗರದ ಒಕ್ಕಲಿಗರ ಕಲ್ಯಾಣ ಮಂಟಪದ ಬಳಿ ಡೊಳ್ಳುಕುಣಿತ, ಶಾಲಾ ಮಕ್ಕಳ ಬ್ಯಾಂಡ್ ವಾದನ, ಗೊಂಬೆ ಕುಣಿತ, ಪಟ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳ ನಡುವೆ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ತಾಲ್ಲೂಕು ಆಡಳಿತ, ಕನ್ನಡ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಅದ್ಧೂರಿ ಸ್ವಾಗತ ಕೋರಿದರು.
ಈ ಸಂಧರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಅನಿಲ್”ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ಪೂರೈಸಿದ ಸಂಭ್ರಮದ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು ಪ್ರತಿ ತಾಲ್ಲೂಕಿನಲ್ಲೂ ಒಂದೊಂದು ದಿನ ಸಂಚಾರ ನಡೆಸಿ, ಮುಂದಿನ ತಾಲ್ಲೂಕಿಗೆ ಸಾಗಲಿದೆ. ಕನ್ನಡ ನಾಡು ನುಡಿಯ ಬಗ್ಗೆ ಇಂದಿನ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ಜೊತೆಗೆ ಸಂಭ್ರಮ ಆಚರಿಸಲು ಈ ರಥಯಾತ್ರೆಯನ್ನು ಸರ್ಕಾರ ಆಯೋಜಿಸಿದೆ” ಎಂದರು.
ಕನ್ನಡ ಪರ ಸಂಘ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು, ಸಾಹಿತಿಗಳು, ಕನ್ನಡ ಪ್ರೇಮಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.