Chikkaballapur : ಮಂಗಳವಾರ ಚಿರವಿನೂತನ ಕನ್ನಡ ಸಂಘದ ಸಹಯೋಗದಲ್ಲಿ ಚಿಕ್ಕಬಳ್ಳಾಪುರ ನಗರದ SJC ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಸ್ವಾಮೀಜಿ ಅರಿವಿನ ಕಾರಣದಿಂದ ಎಲ್ಲ ಭಾಷೆಗಳನ್ನು ಕಲಿಯಬೇಕು ಆದರೆ ಮಾತೃಭಾಷೆಯ ಮೇಲಿನ ಒಲವನ್ನು ತೊರೆಯಬಾರದೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲಾವಿದ ಕಿರಿಕ್ ಕೀರ್ತಿ ಮಾತನಾಡಿ, ಕನ್ನಡ ಶ್ರೀಮಂತ ಭಾಷೆ, ಕನ್ನಡ ಭಾಷೆಯನ್ನು ಪ್ರೀತಿಸಿ, ಬೆಳೆಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡಿರಂಗಪ್ಪ ಮಾತನಾಡಿ, ಕನ್ನಡದ ನೆಲ, ಜಲ ಮಹತ್ವವಾದುದು, ಈ ಅಮೃತ ಭಾಷೆಯು 7 ಕೋಟಿ ಕನ್ನಡಿಗರ ಅಸ್ತಿತ್ವವಾಗಿದೆ. ಕನ್ನಡ ಭಾಷೆಗೆ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ದೊರೆತಿರುವುದು ಶ್ಲಾಘನೀಯ ಎಂದು ಹೇಳಿದರು.
ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಶಿವರಾಮರೆಡ್ಡಿ, ಮಂಗಳಾನಂದನಾಥ ಸ್ವಾಮೀಜಿ, ಪ್ರಾಂಶುಪಾಲ ಜಿ.ಟಿ.ರಾಜು, ಕುಲಸಚಿವ ಸುರೇಶ್ ಇತರರು ಉಪಸ್ಥಿತರಿದ್ದರು..
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಕಾಲೇಜಿನ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮೈದಳೆದಿತ್ತು. ಪ್ಯಾಷನ್ ಶೋ ಗಮನ ಸೆಳೆಯಿತು. ಡೊಳ್ಳು, ಸಾಂಪ್ರದಾಯಿಕ ಧಿರಿಸಿನ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಿತು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur