Sidlaghatta : ಸುವರ್ಣ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕಸಾಪ ವತಿಯಿಂದ ನಗರದ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ತಾಲ್ಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಾಡು, ನುಡಿ, ಪರಂಪರೆಯ ಕುರಿತು ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.
ಜಿಲ್ಲಾ ಮತ್ತು ಶಿಡ್ಲಘಟ್ಟ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದೊಂದಿಗೆ ನಡೆದ ರಸಪ್ರಶ್ನೆ ಸ್ಪರ್ಧೆಗೆ ತಾಲ್ಲೂಕಿನ ವಿವಿಧ ಪ್ರೌಢಶಾಲೆಗಳಿಂದ ಸುಮಾರು 50 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಉತ್ತರ ಪತ್ರಿಕೆಯನ್ನು ಮೌಲ್ಯಮಾಪನ ಮಾಡಿ ಅತ್ಯುತ್ತಮವಾಗಿ ಬರೆದು ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಪ್ರಥಮ, ದ್ವಿತೀಯ, ತೃತೀಯ ಮತ್ತು ಹತ್ತು ಸಮಾಧಾನಕರ ಬಹುಮಾನಗಳನ್ನು ನೀಡಲಾಗುವುದು. ಆದಿನದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಾಲ್ಲೂಕು ಕಸಾಪ ಅಧ್ಯಕ್ಷ ಬಿ.ಆರ್.ಅನಂತ ಕೃಷ್ಣ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಕಸಾಪ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಕರ್ನಾಟಕ 50 ಸಂಭ್ರಮವನ್ನು ಈ ದಿನ ಏಕಕಾಲದಲ್ಲಿ ಜಿಲ್ಲೆಯಾದ್ಯಂತ ರಸಪ್ರಶ್ನೆ ಸ್ಪರ್ಧೆಯನ್ನ ಅಯೋಜಿಸಿ ವಿದ್ಯಾರ್ಥಿಗಳಿಗೆ ಕನ್ನಡ ನಾಡು, ನುಡಿ, ಇತಿಹಾಸ ಮತ್ತು ಪರಂಪರೆಯ ಬಗ್ಗೆ ಮೆಲುಕು ಹಾಕಲು ಸಹಕಾರಿಯಾಗಿದೆ ಎಂದರು.
ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಭಿನಂದನಾ ಪತ್ರ ನೀಡಲಾಯಿತು.
ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ನಿ.ಪೂ.ಅಧ್ಯಕ್ಷ ಎ.ಎಂ.ತ್ಯಾಗರಾಜ್ , ಬಿ.ಆರ್.ಪಿ ಬಿ.ಇ.ಒ.ಕಚೇರಿ ಲಕ್ಷ್ಮೀ ನಾರಾಯಣ , ಉಪನ್ಯಾಸಕರಾದ ಶ್ರೀದರ್.ಎನ್, ಚಂದ್ರಶೇಖರ.ಎಸ್, ಮುನಿರಾಜು, ಶಿಕ್ಷಕರು ಹಾಜರಿದ್ದರು.