Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಕಸಾಪ (KaSaPa) ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ (Krishna Raja Wadiyar IV ) , ಎಚ್.ನರಸಿಂಹಯ್ಯ ಹಾಗೂ ಮಾಸ್ತಿ ಅವರ ಜನ್ಮ ದಿನಾಚರಣೆ (Anniversary) ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಪ್ರೊ.ಕೋಡಿ ರಂಗಪ್ಪ “ನರಸಿಂಹಯ್ಯ ಅವರು ವಿಚಾರಕ್ರಾಂತಿಯ ನೇತಾರ. ಬಡತನದಲ್ಲಿ ಹುಟ್ಟಿ ಬೆಳೆದು ಬೆಂಗಳೂರಿನಲ್ಲಿ ಪ್ರತಿಷ್ಠಿತ ನ್ಯಾಷನಲ್ ಶಿಕ್ಷಣ ಸಂಸ್ಥೆ ಕಟ್ಟಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಆಧುನಿಕ ಮೈಸೂರು ರಾಜ್ಯದ ನಿರ್ಮಾತೃ ಶಿಕ್ಷಣ, ಸಾಹಿತ್ಯ, ಕೃಷಿ ಹಾಗೂ ಸಾಮಾಜಿಕ ನ್ಯಾಯಕ್ಕೆ ವಿಶೇಷ ಕೊಡುಗೆ ನೀಡಿದರು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಕಸಾಪ ಅಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ, ಜಿಲ್ಲಾ ಕಸಾಪ ಸದಸ್ಯರಾದ ಸತೀಶ್ ಡಿ.ಎಂ., ಶ್ರೀರಾಮ್, ಸತೀಶ್.ಸಿ, ಶಿಡ್ಲಘಟ್ಟದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ, ರವಿಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.