Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ (Kannada Sahitya Parishat) (KaSaPa) ವತಿಯಿಂದ ಗುರುವಾರ ಚಿಕ್ಕಬಳ್ಳಾಪುರ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್ (Mirza Ismail) ಜನ್ಮ ದಿನಾಚರಣೆ (Birth Anniversary) ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್ ರ ಕುರಿತು ಉಪನ್ಯಾಸ ನೀಡಿದ ಶಿಕ್ಷಕ ಸರ್ದಾರ್ ಚಾಂದ್ ಪಾಷ “ಕನ್ನಡ ನಾಡು ನುಡಿ, ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಜನರ ಬಗ್ಗೆ ಅಪಾರ ಗೌರವ ಮತ್ತು ಕಾಳಜಿ ಹೊಂದಿದ್ದ ಮಿರ್ಜಾ ಇಸ್ಮಾಯಿಲ್ ಅವರು ತಮ್ಮ ಅವಧಿಯಲ್ಲಿ ಶಿಕ್ಷಣ, ನೀರಾವರಿ, ಹೆಣ್ಣು ಮಕ್ಕಳ ಸಬಲೀಕರಣ ಹಾಗೂ ಆಡಳಿತದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಮೈಸೂರು ಸಂಸ್ಥಾನದ (Kingdom of Mysore) ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಇಂದಿನವರೆಗೂ ಕನ್ನಡಿಗರ ಗೌರವಕ್ಕೆ ಪಾತ್ರರಾಗಿದ್ದಾರೆ” ಎಂದು ತಿಳಿಸಿದರು.
ಕಾರ್ಯಕ್ರಮವನ್ನು ನಗರಸಭಾ ಆಯುಕ್ತ ಪಿ.ಉಮಾಶಂಕರ್, ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಕೋಡಿರಂಗಪ್ಪ, ತಾಲ್ಲೂಕು ಕಸಾಪ ಅಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ, ಲೇಖಕ ಗೋಪಾಲಗೌಡ ಕಲ್ವಮಂಜಲಿ, ಪ್ರಾಂಶುಪಾಲ ರಾಮಕೃಷ್ಣಪ್ಪ ಮಾತನಾಡಿದರು. ಪ್ರೇಮಲೀಲಾ ವೆಂಕಟೇಶ್, ಅಣ್ಣಮ್ಮ, ನಳಿನಾಕ್ಷಿ, ಪದ್ಮಾ, ಹರೀಶ್‌ಬಾಬು, ರಮೇಶ್, ಮಂಚನಬಲೆ ಶ್ರೀನಿವಾಸ್ ಉಪಸ್ಥಿತರಿದ್ದರು. ಕಸಾಪ ಗೌರವ ಕಾರ್ಯದರ್ಶಿ ಎಸ್.ಎನ್.ಅಮೃತಕುಮಾರ್ ಉಪಸ್ಥಿತರಿದ್ದರು.