ಜಿಲ್ಲೆಯ 9 ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ

- Advertisement -
- Advertisement -

Chikkaballapur : 2023ನೇ ಸಾಲಿನ ಕಾಯಕಲ್ಪ ಪ್ರಶಸ್ತಿಗೆ (Kayakalpa Award) ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆ ಚಿಂತಾಮಣಿ, ಪ್ರಾಥಮಿಕ ಆರೋಗ್ಯ ಕೇಂದ್ರ ಜಂಗಮಕೋಟೆ, ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರು, ಜಿಲ್ಲಾ ಆಸ್ಪತ್ರೆ ಚಿಕ್ಕಬಳ್ಳಾಪುರ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಚಿಂತಾಮಣಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗೌರಿಬಿದನೂರು, ಸಾರ್ವಜನಿಕ ಆಸ್ಪತ್ರೆ ಬಾಗೇಪಲ್ಲಿ, ಸಾರ್ವಜನಿಕ ಆಸ್ಪತ್ರೆ ಶಿಡ್ಲಘಟ್ಟ, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ಆರೋಗ್ಯ ಸಂಸ್ಥೆಗಳು ಆಯ್ಕೆಯಾಗಿವೆ.

ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ವಿಭಾಗದ ಉಪನಿರ್ದೇಶಕ ಡಾ.ಎಂ.ವಿ. ವಿಜಯ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ, ಆಡಳಿತ ವೈದ್ಯಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿ, ಪ್ರಶಸ್ತಿ ಪಡೆದ ಆರೋಗ್ಯ ಸಂಸ್ಥೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಲಾಯಿತು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!