Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಎಲ್ಲಾ ತಾಲ್ಲೂಕು ಕಚೇರಿ ಹಾಗೂ ಸಂಘ ಸಂಸ್ಥೆಗಳಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು (Kempegowda Jayanthi) ಆಚರಿಸಲಾಯಿತು.
ಶಿಡ್ಲಘಟ್ಟ :

ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಕೆಂಪೇಗೌಡ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು.
ಚೇಳೂರು:
ಚೇಳೂರು ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.
ಗೌರಿಬಿದನೂರು :
ಗೌರಿಬಿದನೂರು ತಾಲ್ಲೂಕಿನ ಮಿನಿ ವಿಧಾನಸೌಧದಲ್ಲಿ ಗುರುವಾರ ತಹಶೀಲ್ದಾರ್ ಮಹೇಶ್ ಪತ್ರಿ, ಕ್ಷೇತ್ರ ಶಿಕ್ಷಣಧಿಕಾರಿ ಶ್ರೀನಿವಾಸ ಮೂರ್ತಿ, ತಾಲ್ಲೂಕು ಆಡಳಿತ ಸಿಬ್ಬಂದಿ ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಜಯಂತಿ ಆಚರಿಸಲಾಯಿತು.