Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಒಕ್ಕಲಿಗರು ನಾಡಪ್ರಭು ಕೆಂಪೇಗೌಡ ಜಯಂತಿ (Kempe Gowda) (Birth Anniversary) ಯನ್ನು ಪ್ರತಿ ಹಳ್ಳಿಯಿಂದ ಹೂವಿನ ಪಲ್ಲಕ್ಕಿ, ಬೆಳ್ಳಿ ರಥ, ತಮಟೆ ವಾದ್ಯ, ಡೊಳ್ಳು ಕುಣಿತದೊಂದಿಗೆ ಅದ್ಧೂರಿಯಾಗಿ ಆಚರಿಸಿದರು.
ಬೆಳಿಗ್ಗೆ 10.30ರಿಂದ ಚಿಕ್ಕಬಳ್ಳಾಪುರ ನಗರದ ಮರುಳಸಿದ್ದೇಶ್ವರ ದೇಗುಲದ ಬಳಿಯಿಂದ ಎಂ.ಜಿ ರಸ್ತೆ ಹಾಗೂ ಬಿಬಿ ರಸ್ತೆ ಹಾದು ಒಕ್ಕಲಿಗರ ಕಲ್ಯಾಣ ಮಂಟಪದವರೆಗೆ ಕೆಂಪೇಗೌಡರ ಪುತ್ಥಳಿ ಹಾಗೂ ಭಾವಚಿತ್ರವುಳ್ಳ ಬೆಳ್ಳಿ ಪಲ್ಲಕ್ಕಿಯ ಮೆರವಣಿಗೆ ನಡೆಯಿತು. ನಂತರ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು ಮತ್ತು ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮಾಜದ ಪ್ರಗತಿಪರ ರೈತರು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ (K Sudhakar), ಸಾಹಿತಿ ಗೋಪಾಲಗೌಡ ಕಲ್ವಮಂಜಲಿ, ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜು, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು, ಜಿಲ್ಲಾಧಿಕಾರಿ ಆರ್.ಲತಾ (Deputy Commissioner R Latha), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ (S P Mithun Kumar) , ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಕಾಧಿಕಾರಿ ಪಿ.ಶಿವಶಂಕರ್, ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಸೌಭಾಗ್ಯ, ಒಕ್ಕಲಿಗರ ಸಂಘದ ನಿರ್ದೇಶಕ ನಾರಾಯಣಸ್ವಾಮಿ, ಸಮುದಾಯದ ಮುಖಂಡರಾದ ಪ್ರಕಾಶ್, ಮರಳು ಕುಂಟೆ ಕೃಷ್ಣಮೂರ್ತಿ, ಮಂಜುನಾಥ್, ಚನ್ನಪ್ಪರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಶಿಡ್ಲಘಟ್ಟ (Sidlaghatta) ತಾಲ್ಲೂಕಿನಾದ್ಯಂತ ಬಂದಿದ್ದ ಕೆಂಪೇಗೌಡರ ಪುತ್ಥಳಿ ಹಾಗೂ ಭಾವಚಿತ್ರವುಳ್ಳ ಬೆಳ್ಳಿ ಪಲ್ಲಕ್ಕಿಗಳನ್ನು ನಗರದ ಬಸ್ ನಿಲ್ದಾಣದಿಂದ ದಿಬ್ಬೂರಹಳ್ಳಿ ರಸ್ತೆಯ ನ್ಯಾಯಾಲಯದ ಸಮೀಪವಿರುವ ಮೈದಾನದವೆರೆಗು ಮೆರವಣಿಗೆ ಮಾಡಲಾಯಿತು. ನಂತರ ನೆಡದ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ SSLC ಮತ್ತು PUC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿರುವ ಸಮುದಾಯದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ (VISHWA VOKKALIGARA MAHASAMSTHANA MATHA) ದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ, ಮಾಜಿ ಶಾಸಕ ಎಂ.ರಾಜಣ್ಣ, ಜೆಡಿಎಸ್ ಮುಖಂಡ ಬಿ.ಎನ್.ಸಚಿನ್, ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಆಂಜಿನಪ್ಪ ಪುಟ್ಟು, ಶಿವಮೊಗ್ಗ ಶಾಖಾ ಮಠದ ರಮಾನಂದ ಸ್ವಾಮೀಜಿ, ಮುಖಂಡ ತಾದೂರು ರಘು, ಕೆ.ಲಕ್ಷ್ಮಿನಾರಾಯಣ ರೆಡ್ಡಿ, ಕೆಂಪೇಗೌಡರ ಜಯಂತಿ ಆಚರಣಾ ಸಮಿತಿಯ ಬಿ.ನಾರಾಯಣಸ್ವಾಮಿ, ಕೆ.ಎನ್.ಸುಬ್ಬಾರೆಡ್ಡಿ, ಜೆ.ವಿ.ವೆಂಕಟಸ್ವಾಮಿ, ಎ.ಎಂ.ತ್ಯಾಗರಾಜ್, ಪುರುಶೋತ್ತಮ್ ಮತ್ತಿತರರು ಉಪಸ್ಥಿತರಿದ್ದರು.
ಚಿಂತಾಮಣಿ (Chintamani) ತಾಲ್ಲೂಕು ಆಡಳಿತ ಭವನದಲ್ಲಿ ತಹಸೀಲ್ದಾರ್ ಮುನಿಶಾಮಿ ರೆಡ್ಡಿ ನೇತೃತ್ವದಲ್ಲಿ ಸರಳವಾಗಿ ನಾಡಪ್ರಭು ಕೆಂಪೇಗೌಡ ಜಯಂತಿ (Kempe Gowda Jayanthi) ಯನ್ನು ಆಚರಿಸಲಾಯಿತು.
ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವದ ಅಂಗವಾಗಿ ಪದ್ಮನಾಭರಾವ್ ಬಡಾವಣೆಯ ಬಾಗೇಪಲ್ಲಿ (Bagepalli) ಮುಖ್ಯ ರಸ್ತೆಯಲ್ಲಿ ನೂರಾರು ಒಕ್ಕಲಿಗ ಸಮುದಾಯದವರು ಕೆಂಪೇಗೌಡರ ಭಾವಚಿತ್ರವನ್ನು ಬೆಳ್ಳಿರಥದಲ್ಲಿ ಮೆರವಣಿಗೆ ಮಾಡಿ ಪಟ್ಟಣದ ಎಂಜಿ ವೃತ್ತದ ಬಳಿ ಜಯಂತಿ ಆಚರಿಸಿದರು.
ಕಾರ್ಯಕ್ರಮದಲ್ಲಿ ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ಲಕ್ಷ್ಮಿನಾರಾಯಣ ರೆಡ್ಡಿ, ರಾಮಚಂದ್ರ ರೆಡ್ಡಿ, ಆರ್.ಮಂಜುನಾಥ ರೆಡ್ಡಿ, ರಾಮುಸುಬ್ಬು, ವೆಂಕಟಶಿವಾರೆಡ್ಡಿ, ಎಸ್.ಎಸ್.ಶ್ರೀನಿವಾಸ ರೆಡ್ಡಿ, ಕೆ.ಆರ್.ಸುಧಾಕರ್ ರೆಡ್ಡಿ, ಸೀತಾ ಆಂಜನೇಯ ರೆಡ್ಡಿ, ರಘುನಾಥರೆಡ್ಡಿ, ಕೆ.ಎನ್.ಮುಧುಸೂಧನ್ ರೆಡ್ಡಿ, ಕೆ.ಸಹದೇವರೆಡ್ಡಿ, ಸುಬ್ಬಿರೆಡ್ಡಿ, ರೆಡ್ಡಪ್ಪ, ಪಿ.ಎನ್.ಆಂಜನೇಯರೆಡ್ಡಿ ಉಪಸ್ಥಿತರಿದ್ದರು.
Facebook: https://www.facebook.com/hicbpur
Twitter: https://twitter.com/hicbpur
Your email address will not be published. Required fields are marked *
Save my name, email, and website in this browser for the next time I comment.
2021 Chikkaballapur.com