Home News Kolar ಸಿಲಿಂಡರ್‌ ರಿಫಿಲ್ಲಿಂಗ್‌ ಘಟಕದ ಮೇಲೆ ಅಧಿಕಾರಿಗಳ ದಾಳಿ

ಸಿಲಿಂಡರ್‌ ರಿಫಿಲ್ಲಿಂಗ್‌ ಘಟಕದ ಮೇಲೆ ಅಧಿಕಾರಿಗಳ ದಾಳಿ

0
KGF Illegal Gas Refilling Raid

KGF : KGF ನಗರದ ಆಂಡರಸನ್‌ಪೇಟೆಯಲ್ಲಿ ಅಕ್ರಮವಾಗಿ ಸಿಲಿಂಡರ್‌ ರಿಫಿಲ್ಲಿಂಗ್‌ (Illegal Gas Refilling) ಮಾಡುತ್ತಿದ್ದ ಘಟಕದ ಮೇಲೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ (Raid) ನಡೆಸಿ 136 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ದಾಳಿ ನಡೆದ ಸಂದರ್ಭದಲ್ಲಿ ಕೃತ್ಯ ಎಸಗುತ್ತಿದ್ದ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದು, ಗೃಹೋಪಯೋಗಿ ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್‌ಗಳನ್ನು ಇಟ್ಟುಕೊಂಡು ಬೇರೆ ಸಿಲಿಂಡರ್‌ಗಳಿಗೆ ಗ್ಯಾಸ್‌ ತುಂಬವ ಕೆಲಸ ನಡೆಯುತ್ತಿತ್ತು. ದಾಳಿ ಸಂದರ್ಭದಲ್ಲಿ ನಾಲ್ಕು ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗುವುದು ಎಂದು ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ತಿಳಿಸಿದ್ದಾರೆ.

ದಾಳಿ ಸಂದರ್ಭದಲ್ಲಿ ಆಹಾರ ನಿರೀಕ್ಷಕ ರಘು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version