Kolar : 2023–24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ (2nd PUC Result) ಬುಧವಾರ ಪ್ರಕಟವಾಗಿದ್ದು, ಕೋಲಾರ ಜಿಲ್ಲೆ ಶೇ 86.12 ಫಲಿತಾಂಶದೊಂದಿಗೆ ರಾಜ್ಯದಲ್ಲಿ 12ನೇ ಸ್ಥಾನ ಪಡೆದುಕೊಂಡಿದೆ.
ಕಲಾ ವಿಭಾಗದಲ್ಲಿ 1,316 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 945 ವಿದ್ಯಾರ್ಥಿಗಳು ಉತ್ತಿರ್ಣರಾಗಿ 71.81% ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ 6,137 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 5,234 ವಿದ್ಯಾರ್ಥಿಗಳು ಉತ್ತಿರ್ಣರಾಗಿ 85.29% ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 5,907 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 5,234 ವಿದ್ಯಾರ್ಥಿಗಳು ಉತ್ತಿರ್ಣರಾಗಿ 90.16% ಫಲಿತಾಂಶ ಬಂದಿದೆ.
2022–2023 ಸಾಲಿನ ಫಲಿತಾಂಶದಲ್ಲಿ ಕೋಲಾರ ಜಿಲ್ಲೆ 79.2%ರೊಂದಿಗೆ 14 ನೇ ಸ್ಥಾನ ಪಡೆದಿತ್ತು.