Home News Kolar ಕೋಲಾರ ಜಿಲ್ಲಾ BJP ಕಾರ್ಯಕಾರಿಣಿ ಸಭೆ

ಕೋಲಾರ ಜಿಲ್ಲಾ BJP ಕಾರ್ಯಕಾರಿಣಿ ಸಭೆ

0
354
Kolar BJP Meeting

Kolar : ಕೋಲಾರ ನಗರ ಹೊರವಲಯದ ರತ್ನ ಕನ್ವೆಷ್ನನ್‌ ಸೆಂಟರ್‌ನಲ್ಲಿ ಕೋಲಾರ ಜಿಲ್ಲಾ BJP ಯಿಂದ ಗುರುವಾರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು (District BJP Meeting) ಹಮ್ಮಿಕೊಳ್ಳಲಾಗಿತ್ತು.

ಸಭೆಯಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ “ಒಂದೇ ವರ್ಷಕ್ಕೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ತತ್ತರಿಸಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಒಂದೂ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ. ಇವರ ಮೋಸ ರಾಜ್ಯದ ಎಲ್ಲಾ ಜನರಿಗೂ ಗೊತ್ತಾಗಬೇಕು. ಹೀಗಾಗಿ, ಈ ಸರ್ಕಾರ ಇದೇ ರೀತಿ ಮುಂದುವರಿಯಬೇಕೆಂಬುದು ನಮ್ಮ ಅಭಿಲಾಷೆ. ಕಾಂಗ್ರೆಸ್‌ ಸರ್ಕಾರದಿಂದ ಜನ ಈಗಲೇ ಬೇಸತ್ತಿದ್ದು, 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ. ಅದಕ್ಕೂ ಮೊದಲು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಬರುತ್ತಿದೆ. ಅದರಲ್ಲೂ ನಾವು ಗೆಲ್ಲಬೇಕು”ಎಂದು ತಿಳಿಸಿದರು.

ಮಾಜಿ ಸಂಸದ ಎಸ್‌.ಮುನಿಸ್ವಾಮಿ, ಮಾಜಿ ಶಾಸಕ ಮಾಲೂರು ಮಂಜುನಾಥ್‌ ಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ವೈ.ಎ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ಎಂ.ನಾರಾಯಣಸ್ವಾಮಿ, ಬಿ.ಪಿ.ವೆಂಕಟಮುನಿಯಪ್ಪ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!