Kolar : ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ (District Disaster Management meeting) ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ “ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಯಾವುದೇ ರೀತಿಯ ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ನೀರು ಪೋಲಾಗದಂತೆ ನೋಡಿಕೊಳ್ಳಬೇಕು, ಲಭ್ಯವಿರುವ ನೀರಿನ ಸಮರ್ಪಕ ನಿರ್ವಹಣೆ ಮಾಡಬೇಕು. ತೀವ್ರ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿ ಗುರುತಿಸಿ, ಮಾಲೀಕರೊಂದಿಗೆ ನಿಯಮಾವಳಿ ಅನ್ವಯ ಒಡಂಬಡಿಕೆ ಮಾಡಿಕೊಂಡು ಜಿಲ್ಲೆಯ ಗ್ರಾಮಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರಿನ ಸಮರ್ಪಕ ನಿರ್ವಹಣೆಯಾಗಬೇಕು” ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸವಂತಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.