Kolar: ಕೋಲಾರ ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪ್ರಮಾಣದ ₹50 ಲಕ್ಷ ಮೌಲ್ಯದ 806 ಗ್ರಾಂ MDMA ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋಲಾರ cuber ಅಪರಾಧ ಮತ್ತು ಮಾದಕ ವಸ್ತುಗಳ ನಿಯಂತ್ರಣ ಠಾಣೆ (ಸೆನ್) ಪೊಲೀಸರು ದಾಳಿ ನಡೆಸಿ, ಈ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್‌ನನ್ನು (Drug peddler) ಬಂಧಿಸಿದ್ದಾರೆ.
ಪೊಲೀಸರು ಬಂಧಿಸಿದ ಆರೋಪಿಯನ್ನು ಬೆಂಗಳೂರು, ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಜಿ.ಹಳ್ಳಿಯ ಸೈಯದ್ ಪುರ್ಖಾನ್ ಎಂದು ಗುರುತಿಸಲಾಗಿದೆ. ಬಂಧಿತನಿಂದ 806 ಗ್ರಾಂ ಎಂಡಿಎಂಎ ಮಾದಕ ವಸ್ತು, ಕೆಟಿಎಂ ಡ್ಯೂಕ್ ದ್ವಿಚಕ್ರ ವಾಹನ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಈ ಜಾಲದಲ್ಲಿ ಇನ್ನೂ ಹಲವರು ಸಂಪರ್ಕದಲ್ಲಿರುವ ಸಾಧ್ಯತೆ ಇದೆ, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಮಾಹಿತಿ ನೀಡಿದ್ದಾರೆ.