Mulabagilu : ಮುಳಬಾಗಿಲು ತಾಲ್ಲೂಕಿನ ಕುರುಡುಮಲೆಯಲ್ಲಿ ಗಣೇಶನಿಗೆ (Kurudumale Ganesha temple) ಸೋಮವಾರ ಬೆಳಿಗ್ಗೆ ಕೋಲಾರ ಲೋಕಸಭಾ (Kolar Lokasabha) ಕಾಂಗ್ರೆಸ್ (Congress) ಅಭ್ಯರ್ಥಿ ಕೆ.ವಿ.ಗೌತಮ್, ಸಚಿವರಾದ ಬೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಶಾಸಕರು ಹಾಗೂ ಮುಖಂಡರು ಜೊತೆಗೂಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷದ ಕೋಲಾರ ಮೀಸಲು ಲೋಕಸಭೆ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ (Campaign) ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
ಸಂಧರ್ಭದಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್ “ಸಾಂಕೇತಿವಾಗಿ ಇಂದು ಪ್ರಚಾರ ಆರಂಭಿಸಿದ್ದು ಏಪ್ರಿಲ್ 4 ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆ ಮೂಲಕ ಅಧಿಕೃತವಾಗಿ ಪ್ರಚಾರ ಆರಂಭವಾಗಲಿದೆ. ಅಭ್ಯರ್ಥಿಗಳ ಗೆಲುವಿಗೆ ಕಾಂಗ್ರೆಸ್‌ನಲ್ಲಿ ಯಾವುದೇ ಒಬ್ಬರ ಮೇಲೆ ಜವಾಬ್ದಾರಿ ಹಾಕಲ್ಲ. ಕ್ಷೇತ್ರದಲ್ಲಿ ನಾನು, ಡಾ.ಎಂ.ಸಿ.ಸುಧಾಕರ್ ಹಾಗೂ ಐವರು ಶಾಸಕರಿದ್ದು, ನಮ್ಮ ಅಭ್ಯರ್ಥಿ ಗೆಲ್ಲಿಸುತ್ತೇವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿದ್ದೆವು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನರು ಮತ್ತೆ ನಮ್ಮ ಕೈ ಹಿಡಿಯುತ್ತಾರೆ, ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ ಪಡೆಯುತ್ತೇವೆ. ಮುನಿಯಪ್ಪ ಮತ್ತು ರಮೇಶ್ ಕುಮಾರ್ ಪ್ರಚಾರಕ್ಕೆ ಬರುತ್ತಾರೆ ಅತಿ ಹೆಚ್ಚಿನ ಮತಗಳಲ್ಲಿ ನಾವು ಗೆಲ್ಲುತ್ತೇವೆ” ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ, ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಶಿಡ್ಲಘಟ್ಟದ ರಾಜೀವ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಮುಖಂಡರಾದ ಆದಿನಾರಾಯಣ, ರತ್ನಮ್ಮ, ಖಯ್ಯಂ ಮತ್ತಿತರರು ಉಪಸ್ಥಿತರಿದ್ದರು.