Kolar : April 26 ರಂದು ಕೋಲಾರ ಮೀಸಲು ಲೋಕಸಭೆ ಕ್ಷೇತ್ರಕ್ಕೆ (Kolar Lokasabha Election) ಮತದಾನ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ April 24ರ ಬುಧವಾರ ಸಂಜೆ 6ರಿಂದ 26ರ ಶುಕ್ರವಾರ ಸಂಜೆ 6ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ (Curfew) ಜಾರಿಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶಿಸಿದ್ದಾರೆ.
ನಿಷೇಧಾಜ್ಞೆಯ ಸಮಯದಲ್ಲಿ ಅಕ್ರಮಕೂಟ ಹಾಗೂ ಸಾರ್ವಜನಿಕ ಸಭೆ ನಡೆಸುವುದನ್ನು ನಿರ್ಬಂಧಿಸಲಾಗಿದ್ದು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ಆಯುಧ ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಮನೆಮನೆಗೆ ಭೇಟಿ ನೀಡಿ ಮತಯಾಚಿಸಲು ಅವಕಾಶವಿದೆ. ಆದರೆ, 5ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ.
ಮತದಾರರ ಮೇಲೆ ಪ್ರಭಾವ ಬೀರಲು ರಾಜಕೀಯ ಲಾಭಕ್ಕಾಗಿ ನಗದು, ಉಡುಗೊರೆ ಹಾಗೂ ಮದ್ಯ ವಿತರಿಸುವುದನ್ನು ನಿಷೇಧಿಸಲಾಗಿದೆ. ಇಂತಹ ಚಟುವಟಿಕೆಗಳ ಮೇಲೆ ಕಣ್ಗಾವಲು ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಲಾಗಿದೆ.