ಕೋಲಾರ ಲೋಕಸಭಾ ಕ್ಷೇತ್ರ: BJP–JDS ಶಕ್ತಿ ಪ್ರದರ್ಶನ

- Advertisement -
- Advertisement -

Kolar : ಕೋಲಾರ ಲೋಕಸಭಾ (Lokasabha) BJP ಬೆಂಬಲಿತ JDS ಅಭ್ಯರ್ಥಿ ಎಂ.ಮಲ್ಲೇಶ್‌ ಬಾಬು ಗುರುವಾರ ಬೃಹತ್‌ ಮೆರವಣಿಗೆಯಲ್ಲಿ (Road show) ಸಾಗಿ ಕೋಲಾರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರು. ನಗರದ ಬಂಗಾರಪೇಟೆ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಆರಂಭಿಸಿ ಎರಡೂ ಪಕ್ಷಗಳ ಸಾವಿರಾರು ಕಾರ್ಯಕರ್ತರು ಧ್ವಜ ಹಿಡಿದು ಜಯಘೋಷ ಹಾಕುತ್ತಾ ಪಾಲ್ಗೊಂಡಿದ್ದರು.

ಸಭೆಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸದಸ್ಯ ಜಿ.ಟಿ.ದೇವೇಗೌಡ ಮಾತನಾಡಿ “ಕಾಂಗ್ರೆಸ್‌ ನಾಯಕರು ರಾಜ್ಯದ ಖಜಾನೆಯನ್ನು ಲೂಟಿ ಮಾಡಲು ಶಪಥ ಮಾಡಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ರಾಜ್ಯದ ಜನತೆಗೆ ಕುಡಿಯುವ ನೀರು ಒದಗಿಸಲು ಸರ್ಕಾರ ವಿಫಲವಾಗಿದೆ. ಜೆಡಿಎಸ್‌ ಹಾಗೂ ಬಿಜೆಪಿ ಹೊಂದಾಣಿಕೆ ಸಾಧ್ಯವಿಲ್ಲ ಎಂದುಕೊಂಡಿದ್ದರು. ಆದರೆ, ಬೂತ್ ಮಟ್ಟದಿಂದಲೂ ಹೊಂದಾಣಿಕೆ ಆಗುತ್ತಿದೆ” ಎಂದರು.

ಬೃಹತ್ ಮೆರವಣಿಗೆಯಲ್ಲಿ ಸಂಸದ ಎಸ್.ಮುನಿಸ್ವಾಮಿ, ಶಾಸಕರಾದ ಸಮೃದ್ಧಿ ಮಂಜುನಾಥ್, ಎಂ.ರವಿಕುಮಾರ್, ವಿಧಾನ ಪರಿಷತ್‌ ಸದಸ್ಯ ಇಂಚರ ಗೋವಿಂದರಾಜು, ಮಾಜಿ ಶಾಸಕರಾದ ಜೆ.ಕೆ.ಕೃಷ್ಣಾರೆಡ್ಡಿ, ವರ್ತೂರು ಆರ್.ಪ್ರಕಾಶ್, ಮಂಜುನಾಥಗೌಡ, ಎಂ.ನಾರಾಯಣಸ್ವಾಮಿ, ಮುಖಂಡರಾದ ಸಿಎಂಆರ್‌ ಶ್ರೀನಾಥ್, ಜಿ.ಇ.ರಾಮೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಹರೀಶ್‌, ವಕ್ಕಲೇರಿ ರಾಮು, ಬಿಜೆಪಿ ಮಾಧ್ಯಮ ಪ್ರಮುಖ್‌ ಪ್ರವೀಣಗೌಡ, ಅಪ್ಪಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!