Kolar : ಕೋಲಾರ ಜಿಲ್ಲಾಡಳಿತ ಭವನದ ಕಚೇರಿಯಲ್ಲಿ ಮಂಗಳವಾರ ಅಕ್ರಮ ರೀಫಿಲಿಂಗ್ ದಂಧೆ (Illegal LPG Filling) ಸಂಬಂಧ ಗ್ಯಾಸ್ ಏಜೆನ್ಸಿಗಳ ಮಾಲೀಕರೊಂದಿಗೆ ಸಭೆ (Gas Agency Owners Meeting) ನಡೆಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ “ಕೋಲಾರ ಜಿಲ್ಲೆಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ದಂಧೆಯು ಅಕ್ರಮವಾಗಿ ನಡೆಯುತ್ತಿದ್ದು, ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮಕೈಗೊಳ್ಳಲಾಗುವುದು ಮತ್ತು ಏಜೆನ್ಸಿಯವರ ಪರವಾನಗಿ ರದ್ದು ಮಾಡಲಾಗುವುದು. ಇಂತಹ ಕೃತ್ಯಗಳು ಸಮಾಜದಲ್ಲಿ ಅಘಾತಕಾರಿ ಬೆಳವಣಿಗೆಯಾಗಿದ್ದು, ಸಾರ್ವಜನಿಕರು ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು” ಎಂದು ಮನವಿ ಮಾಡಿದರು.
ಸಭೆಯಲ್ಲಿ ಆಹಾರ ಇಲಾಖೆಯ ಲತಾ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ 41 ಏಜೆನ್ಸಿ ಮಾಲೀಕರು, ಇಂಡಿಯನ್ ಆಯಿಲ್, ಎಚ್.ಪಿ, ಬಿ.ಪಿ ಗ್ಯಾಸ್ ಕಂಪನಿಯ ಅಧಿಕಾರಿಗಳು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.