Chintamani : ಐದು ವರ್ಷಗಳ ನಂತರ ಅಪಾರ ಭಕ್ತರ ಸಮುಖದಲ್ಲಿ ಚಿಂತಾಮಣಿ ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಕೋನಕುಂಟ್ಲು ಲಕ್ಷ್ಮೀವೆಂಕಟರಮಣಸ್ವಾಮಿ ರಥೋತ್ಸವ (Konakuntlu Lakshmi Venkataramana Swamy Rathotsava) ಅದ್ದೂರಿಯಾಗಿ ನಡೆಯಿತು.
ರಥೋತ್ಸವ ಅಂಗವಾಗಿ ದೇವಾಲಯ ಹಾಗೂ ಬ್ರಹ್ಮರಥ ವಿಶೇಷವಾಗಿ ಹೂವುಗಳಿಂದ ಅಲಂಕರಿಸಲಾಗಿದ್ದು ಪೂಜೆ ನಂತರ ಅಲಂಕೃತ ಪಲ್ಲಕ್ಕಿಯಲ್ಲಿ ಮಂಗಳವಾದ್ಯಗಳೊಂದಿಗೆ ಉತ್ಸವ ಮೂರ್ತಿ ಆಲಂಕೃತ ರಥಕ್ಕೆ ಕರೆತರಲಾಯಿತು. ವಿಶೇಷ ಹೂವಿನ ಅಲಂಕಾರ, ಅಭಿಷೇಕ, ಹೋಮ, ಹವನ ಸೇರಿದಂತೆ ಧಾರ್ಮಿಕ ಕೈಂಕರ್ಯ ಲಕ್ಷ್ಮೀವೆಂಕಟರಮಣಸ್ವಾಮಿಗೆ ನಡೆಯಿತು.
ಅನೇಕ ಭಕ್ತರು ಬೆಳಿಗ್ಗೆಯಿಂದಲೇ ದೇವಾಲಯಕ್ಕೆ ಭೇಟಿ ನೀಡಿ ರಥೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ದೇವಾಲಯ ಟ್ರಸ್ಟ್ ಹಾಗೂ ಗ್ರಾಮಸ್ಥರಿಂದ ಅನ್ನ ದಾಸೋಹ ಏರ್ಪಡಿಸಲಾಗಿತ್ತು.
ಲಕ್ಷ್ಮೀವೆಂಕಟರಮಣಸ್ವಾಮಿ ರಥೋತ್ಸವ ಅಂಗವಾಗಿ ಧನಗಳ ಜಾತ್ರೆ ಅದ್ದೂರಿಯಾಗಿ ನಡೆಯಿತು. ಶಾಸಕ ಎಂ.ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ, ಕೋಚಿಮುಲ್ ನಿರ್ದೇಶಕ ಊಲವಾಡಿ ಆಶ್ವಥನಾರಾಯಣಬಾಬು ಪಾಲ್ಗೊಂಡಿದ್ದರು.