Chikkaballapur : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಚಿಕ್ಕಬಳ್ಳಾಪುರ ವಿಭಾಗ ಕಚೇರಿ ಹಾಗೂ ಜಿಲ್ಲಾಡಳಿತದಿಂದ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪಘಾತ ರಹಿತ ಚಾಲನೆ (Accident Free Driving) ಮಾಡಿದ 63 ಚಾಲಕರಿಗೆ ಬೆಳ್ಳಿ ಪದಕ (Silver Medal) ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ “ರಾಷ್ಟ್ರದಲ್ಲಿಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸೇವೆಗಳು ಹೆಚ್ಚು ವಿಶ್ವಾಸಾರ್ಹತೆ ಗಳಿಸಿದ್ದು ಕೆಎಸ್‌ಆರ್‌ಟಿಸಿ ಚಿಕ್ಕಬಳ್ಳಾಪುರ ವಿಭಾಗದ ಚಾಲಕರು ನಿಗಮದ ವಾಹನಗಳ ಚಾಲನ ಅವಧಿಯಲ್ಲಿ ಇಂಧನ ಉಳಿಕೆ, ಸಮಯ ಪರಿಪಾಲನೆ ಹಾಗೂ ಅಪಘಾತಗಳನ್ನು ತಡೆಗಟ್ಟುವಲ್ಲಿ ರಾಜ್ಯದ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ. ವಿಭಾಗದ 63 ಚಾಲಕರು ಬೆಳ್ಳಿ ಪದಕ ಪಡೆದು ವಿಭಾಗಕ್ಕೆ, ರಾಜ್ಯಕ್ಕೆ ಒಳ್ಳೆಯ ಕೊಡುಗೆ ನೀಡಿದ್ದಿರಿ. ನೀವು ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದಲ್ಲಿ ಚಿನ್ನದ ಪದಕವನ್ನು ಪಡೆಯಿರಿ” ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಾಧಿಕಾರಿ ಹಿಮವರ್ಧನ ನಾಯ್ದು, ಕೆಎಸ್‌ಆರ್‌ಟಿಸಿ ಚಿಕ್ಕಬಳ್ಳಾಪುರ ವಿಭಾಗದ ಡಿಎಂಒ ಮಂಜುನಾಥ ಕಲಗೇರಿ, ಉಗ್ರಾಣ ಅಧಿಕಾರಿ ವೆಂಕಟರಮಣ, ಸಹಾಯಕ ನಿಯಂತ್ರಣಾಧಿಕಾರಿ ಮಂಜುನಾಥ್, ಬೆಳ್ಳಿ ಪದಕ ಪುರಸ್ಕ್ರತ ಚಾಲಕರು ಮತ್ತು ಅವರ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು.