Chikkaballapur : ಚಿಕ್ಕಬಳ್ಳಾಪುರ ಕೆ.ಎಸ್.ಆರ್.ಟಿ.ಸಿ (KSRTC) ವಿಭಾಗದ ವ್ಯಾಪ್ತಿಯಲ್ಲಿ 2026ನೇ ಸಾಲಿಗೆ ಅಂಗವಿಕಲರಿಗೆ (Disabled Persons) ರಿಯಾಯಿತಿ ಬಸ್‌ಪಾಸ್‌ಗಳ ನವೀಕರಣ ಪ್ರಕ್ರಿಯೆಯನ್ನು ಡಿಸೆಂಬರ್ 30 ರಿಂದ ಪ್ರಾರಂಭಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಿಸಿದ್ದಾರೆ.
ರಿಯಾಯಿತಿ ಬಸ್‌ಪಾಸ್‌ಗಳ ನವೀಕರಣಕ್ಕಾಗಿ 2026ರ ಫೆಬ್ರವರಿ 28 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳು ಆಯಾ ತಾಲ್ಲೂಕಿನ ಬಸ್ ನಿಲ್ದಾಣಗಳಾದ ಚಿಕ್ಕಬಳ್ಳಾಪುರ, ಚಿಂತಾಮಣಿ, ಬಾಗೇಪಲ್ಲಿ, ಗುಡಿಬಂಡೆ, ಗೌರಿಬಿದನೂರು, ದೊಡ್ಡಬಳ್ಳಾಪುರ ಮತ್ತು ಶಿಡ್ಲಘಟ್ಟ ಘಟಕಗಳ ವ್ಯಾಪ್ತಿಯಲ್ಲಿ ನವೀಕರಣ ಮಾಡಿಕೊಳ್ಳಬಹುದು.
ಹೊಸದಾಗಿ ಅಂಗವಿಕಲರಿಗೆ ರಿಯಾಯಿತಿ ಬಸ್‌ಪಾಸ್ ಪಡೆಯಲು ಬಯಸುವವರು ಚಿಕ್ಕಬಳ್ಳಾಪುರ ವಿಭಾಗೀಯ ಕಚೇರಿಯಲ್ಲಿ ಸಮರ್ಪಕ ದಾಖಲೆಗಳನ್ನು ಸಲ್ಲಿಸಿ ಪಡೆಯಬಹುದು. ಈ ಸಂಬಂಧ ಫಲಾನುಭವಿಗಳು ಕಡ್ಡಾಯವಾಗಿ ಸೇವಾಸಿಂಧು ತಂತ್ರಾಂಶದಲ್ಲಿ (Seva Sindhu Portal) ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. 2025ನೇ ಸಾಲಿನಲ್ಲಿ ವಿತರಿಸಿರುವ ಬಸ್‌ಪಾಸ್‌ಗಳನ್ನು 2026ರ ಫೆಬ್ರವರಿ 28 ರವರೆಗೆ ಮಾನ್ಯ ಮಾಡಲಾಗುವುದು ಎಂದು ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
