ಕನ್ನಡಕ್ಕೆ ರಾಜ್‌ಕುಮಾರ್ ಅವರ ಸೇವೆ ಅನನ್ಯ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ನಗರದ KSRTC ಘಟಕ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ಚಿಕ್ಕಬಳ್ಳಾಪುರ ವಿಭಾಗ ವತಿಯಿಂದ ಶುಕ್ರವಾರ ರಾಜ್‌ ಕುಮಾರ್ (Dr. Rajkumar) ಸಂಸ್ಮರಣೆ ಮತ್ತು ಕನ್ನಡ ರಾಜ್ಯೋತ್ಸವ (Kannada Rajyotsava) ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಮನು ಬಳಿಗಾರ್ ಮಾತನಾಡಿ ” ಕನ್ನಡಕ್ಕೆ ರಾಜ್‌ಕುಮಾರ್ ಅವರ ಸೇವೆ ಅನನ್ಯವಾದುದು. ಅವರು ಗೋಕಾಕ್ ಚಳವಳಿಯ ನೇತೃತ್ವವಹಿಸಿದ ಕಾರಣ ಆ ಚಳವಳಿ ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರಿತು. ರಾಜ್‌ಕುಮಾರ್ ಕನ್ನಡದ ಅಸ್ಮಿತೆ. ಈ ಕಾರ್ಯಕ್ರಮವನ್ನು ಶಿಸ್ತಿನಿಂದ ಆಯೋಜಿಸಿದ್ದಾರೆ. ಇಂತಹ ಕಾರ್ಯಕ್ರಮಗಳು ನಡೆಯುವ ಮೂಲಕ ಕನ್ನಡ ನಾಡು, ನುಡಿಯನ್ನು ಉಳಿಸಿ ಬೆಳೆಸಬಹುದು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ.ಚನ್ನೇಗೌಡ, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜು, ಘಟಕದ ವ್ಯವಸ್ಥಾಪಕ ಲಕ್ಷ್ಮಿಪತಿ, ಶ್ರೀನಿವಾಸ್ ಹಾಗೂ ಕೆಎಸ್ಆರ್‌ಟಿಸಿ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!