21.2 C
Bengaluru
Thursday, December 12, 2024

ಕುಂದಲಗುರ್ಕಿ Grama Panchayat ನೂತನ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ

- Advertisement -
- Advertisement -

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕಸಬಾ ಹೋಬಳಿಯ ಕುಂದಲಗುರ್ಕಿ ಗ್ರಾಮ ಪಂಚಾಯಿತಿಗೆ (Kundalagurki Grama Panchayat) ನೂತನ ಅಧ್ಯಕ್ಷರಾಗಿ ಗಾಯಿತ್ರಮ್ಮ, ಉಪಾಧ್ಯಕ್ಷರಾಗಿ ವೆಂಕಟ ಲಕ್ಷ್ಮಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸದಸ್ಯರ ಒಮ್ಮತದ ಮೇರೆಗೆ ಕುಂದಲಗುರ್ಕಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರನ್ನಾಗಿ JDS ಬೆಂಬಲಿತ ಅಭ್ಯರ್ಥಿ ಗಾಯಿತ್ರಮ್ಮ, ಉಪಾಧ್ಯಕ್ಷರಾಗಿ ವೆಂಕಟ ಲಕ್ಷ್ಮಮ್ಮ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಈ ಹಿಂದೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರು 15 ತಿಂಗಳುಗಳ ಅವಧಿಯನ್ನು ಪೂರ್ಣಗೊಳಿಸಿದ ಹಿನ್ನೆಲೆ ಗಂಗಯ್ಯ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಉಪಾಧ್ಯಕ್ಷರ ಸ್ಥಾನಕ್ಕೆ ರತ್ನಮ್ಮ ರಾಜೀನಾಮೆ ನೀಡಿದ್ದರು. ಗ್ರಾಮ ಪಂಚಾಯತಿ ಸದಸ್ಯರ ಒಮ್ಮತದ ಮೇರೆಗೆ ಗಾಯಿತ್ರಮ್ಮ ಅವರನ್ನು ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ವೆಂಕಟಲಕ್ಷ್ಮಮ್ಮ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣೆ ಅಧಿಕಾರಿ ಮಂಜುನಾಥ ತಿಳಿಸಿದರು.

ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಜೆಡಿಎಸ್ ಮುಖಂಡ ಬಿ. ಎನ್. ರವಿಕುಮಾರ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಗಾಯಿತ್ರಮ್ಮ ಮತ್ತು ವೆಂಕಟಲಕ್ಷ್ಮಮ್ಮ ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪಿಡಿಓ ಆದಿಲಕ್ಷ್ಮಿ, ಕಾರ್ಯದರ್ಶಿ ರಮೇಶ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಂಗಯ್ಯ, ಮಾಜಿ ಉಪಾಧ್ಯಕ್ಷೆ ರತ್ನಮ್ಮ, ಸದಸ್ಯರಾದ ಮುನಿರೆಡ್ಡಿ, ಮುನಿರಾಜು, ರಮೇಶ್ ರೆಡ್ಡಿ, ಅರ್. ಟಿ. ಮುನೇಗೌಡ, ವೆಂಕಟರೆಡ್ಡಿ, ಸುನಂದಮ್ಮ, ಹೇಮಾವತಿ ಸೇರಿದಂತೆ ಗ್ರಾಮದ ಮುಖಂಡರು ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

- Advertisement -
Latest news
- Advertisement -
Related news
- Advertisement -
error: Content is protected !!