ಕುಂದಲಗುರ್ಕಿ ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

- Advertisement -
- Advertisement -

Kundalagurki, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸುನಂದಮ್ಮ, ಉಪಾಧ್ಯಕ್ಷರಾಗಿ ಮುನಿರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕುಂದಲಗುರ್ಕಿ ಗ್ರಾ,ಪಂ.ಆಡಳಿತವು ಜೆಡಿಎಸ್‌ನ ಹಿಡಿತದಲ್ಲೆ ಮುಂದುವರೆದಿದೆ.

ತಾಲ್ಲೂಕಿನ ಕುಂದಲಗುರ್ಕಿ ಗ್ರಾಮಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷಸ್ಥಾನ ಸಾಮಾನ್ಯ (ಮಹಿಳೆ) ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನವು ಎಸ್‌.ಸಿ ವರ್ಗಕ್ಕೆ ಮೀಸಲಾಗಿತ್ತು.

ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಸುನಂದಮ್ಮ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಮುನಿರಾಜು ಮಾತ್ರವೇ ನಾಮಪತ್ರ ಸಲ್ಲಿಸಿದ್ದು ಈ ಇಬ್ಬರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್ ಘೋಷಿಸಿದರು.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಎಲ್ಲ ಸದಸ್ಯರು, ಹಾಗೂ ಸಿಬ್ಬಂದಿ ಅಭಿನಂದಿಸಿದರು.

ಗ್ರಾ.ಪಂ ಪಿಡಿಓ ಟಿ.ಆದಿಲಕ್ಷ್ಮಿ, ಸಹಾಯಕ ಚುನಾವಣಾಧಿಕಾರಿ ಹೆಚ್.ಮುನಿರಾಜು, ಮಾಜಿ ಗ್ರಾಪಂ ಅಧ್ಯಕ್ಷ ಕೆ.ಹೆಚ್.ಆನಂದರಾಮರೆಡ್ಡಿ, ಮುಖಂಡರಾದ ಚನ್ನಕೇಶವರೆಡ್ಡಿ, ಚಂದ್ರಶೇಖರ್, ನಾಗಣ್ಣ, ಅಂಬರೀಶ್ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!