Chikkaballapur : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮಿಕಾಂತ್ ಮಿಸ್ಕಿನ್ (Lakshmikanth J Miskin) ಮತ್ತು ಲೋಕಾಯುಕ್ತ DySP ಪುರುಷೋತ್ತಮ್ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ (Chikkaballapur District Hospital) ಭೇಟಿ ನೀಡಿ ರೋಗಿಗಳ ಯೋಗಕ್ಷೇಮವನ್ನು ವಿಚಾರಿಸಿದರು. ಈ ಸಂದರ್ಭದಲ್ಲಿ ಕೆಲವು ರೋಗಿಗಳು ಆಸ್ಪತ್ರೆಯಲ್ಲಿ ವೈದ್ಯರು (Doctors) ಸ್ಪಂದಿಸದೆ ಮಾತ್ರೆಗಳನ್ನು ಹೊರಗೆ ತರುವಂತೆ ಚೀಟಿ ಬರೆದುಕೊಡಲಾಗುತ್ತಿದೆ ಎಂದು ದೂರಿದರು.
ಆರ್ಥಿಕವಾಗಿ ಬಲಾಢ್ಯರಾಗಿದ್ದರೆ ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಿದ್ದರು ಇಲ್ಲಿಗೆ ಬರುವ ಬಡ ರೋಗಿಗಳು ಮತ್ತು ಅವರ ಕುಟುಂಬದವರಿಗೆ ವೈದ್ಯರು ಸೂಕ್ತವಾಗಿ ಸ್ಪಂದಿಸಬೇಕು. ಆಸ್ಪತ್ರೆಗೆ ಗ್ರಾಮೀಣ ಹಿನ್ನೆಲೆಯ ಅನಕ್ಷರಸ್ಥರು ಬಂದಾಗ ಅವರಿಗೆ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಿ ಅವರು ಯಾವ ವಿಭಾಗಕ್ಕೆ ಹೋಗಬೇಕು, ಯಾರನ್ನು ಭೇಟಿಯಾಗಬೇಕು ಎನ್ನುವ ಬಗ್ಗೆ ತಿಳಿವಳಿಕೆ ಹೇಳಬೇಕು. ರೋಗಿಗಳು ಮತ್ತು ಅವರ ಕುಟುಂಬದವರ ಜತೆ ಸೌಜನ್ಯದಿಂದ ವರ್ತಿಸಿ ಎಂದು ಲೋಕಾಯುಕ್ತ ಡಿವೈಎಸ್‌ಪಿ ಪುರುಷೋತ್ತಮ್ ಹೇಳಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ರಾಜಾರೆಡ್ಡಿ ಹಾಗೂ ವೈದ್ಯರು, ಶುಶ್ರೂಷಕಿಯರು ಉಪಸ್ಥಿತರಿದ್ದರು.