Gubibande : ಗುಡಿಬಂಡೆ ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವನ್ನು ನಿವೃತ್ತ ತಹಶೀಲ್ದಾರ್ ವಿಜಯ್ ಕುಮಾರ್ ಉದ್ಘಾಟಿಸಿದರು.
ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ” ಅತಿಯಾದ ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಯುವಜನರಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು ಇಂದು ಗ್ರಂಥಾಲಯಗಳಲ್ಲಿ ಕೇವಲ ವಯೋವೃದ್ಧರು ಮಾತ್ರ ಕಾಣುತ್ತಾರೆ. ಪ್ರತಿಯೊಬ್ಬ ವ್ಯಕ್ತಿಯು ತನ್ನ ಆಲೋಚನಾ ಕ್ರಮವನ್ನು ರೂಢಿಸಿಕೊಳ್ಳಲು ಮತ್ತು ಜೀವನ ರೂಪಿಸಿಕೊಳ್ಳಲು ಪುಸ್ತಕಗಳು ಸಹಕಾರಿಯಾಗಿದ್ದು, ನಮ್ಮ ಪೂರ್ವಜರು ತಮ್ಮ ಅನುಭವಗಳನ್ನು ಪುಸ್ತಕ ರೂಪದಲ್ಲಿ ಬರೆದು ಸಂಗ್ರಹಿಸಿದ್ದಾರೆ. ಅವುಗಳನ್ನು ಓದುವ ಮೂಲಕ ನಮ್ಮ ಬುದ್ದಿ ಹಾಗೂ ಅವರ ಮಾರ್ಗದರ್ಶನದಲ್ಲಿ ನಡೆಯಲು ಸಹಕಾರಿಯಾಗುತ್ತದೆ ” ಎಂದು ಹೇಳಿದರು.
ನಾಗರೀಕತೆ ಹಾಗೂ ಜ್ಞಾನದ ಬೆಳವಣಿಗೆಯಲ್ಲಿ ಗ್ರಂಥಾಲಯಗಳ ಪಾತ್ರ ಹೆಚ್ಚು, ಪ್ರಸ್ತುತ ಪಟ್ಟಣದಲ್ಲಿರುವ ಗ್ರಂಥಾಲಯಕ್ಕೆ ಸ್ವಂತ ಕಟ್ಟಡವಿಲ್ಲದೆ ಅದೋಗತಿಗೆ ತಲುಪಿರುವುದರಿಂದ ಸ್ಥಳೀಯ ಪ್ರತಿನಿಧಿಗಳು ಕೂಡಲೆ ಈ ಬಗ್ಗೆ ಗಮನಹರಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ವಿದ್ಯಾರ್ಥಿಗಳು ಗ್ರಂಥಾಲಯಗಳಲ್ಲಿನ ಪುಸ್ತಕಗಳ ಪ್ರಯೋಜನ ಪಡೆಯಬೇಕು ಎಂದು ಪರಿಸರ ವೇದಿಕೆಯ ಮುಖಂಡ ಆನಂದ್ ತಿಳಿಸಿದರು.
ಗ್ರಂಥಾಲಯದ ಸಿಬ್ಬಂದಿಗಳಾದ ಅಲ್ತಾಫ್, ನರಸಿಂಹಮೂರ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.