Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದಲ್ಲಿ ಲೋಕಸಭೆ ಚುನಾವಣಾ ಪೂರ್ವ ಸಂಬಂಧ ನೇಮಿಸಿರುವ ಸೆಕ್ಟರ್ ಮತ್ತು ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ (Lokasabha Election Police Workshop) ಹಮ್ಮಿಕೊಳಲಾಗಿತ್ತು.
ಕಾರ್ಯಾಗಾರದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ “ಯಾವುದೇ ಕ್ಷಣದಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆ ಆಗಬಹುದು. ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ನಿಷ್ಪಕ್ಷಪಾತ ಹಾಗೂ ಪ್ರಾಮಾಣಿವಾಗಿ ಕಾರ್ಯನಿರ್ವಹಿಸಬೇಕುಚುನಾವಣೆ ನೀತಿ ಸಂಹಿತೆ ಜಾರಿಯಾದ ಮೇಲೆ ಆಯೋಗ ಅಪೇಕ್ಷಿಸುವ ಮಾಹಿತಿಯನ್ನು ನಿಗದಿತ ಅವಧಿಯೊಳಗೆ ಸ್ಪಷ್ಟ ಹಾಗೂ ಖಚಿತವಾಗಿ ನೀಡಬೇಕು. ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಆಗಿರುವವರು ನಿಗದಿತ ಸಮಯಕ್ಕೆ ಮುಂಚಿತವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಪಾಳಿ ಮೇಲೆ ಕರ್ತವ್ಯ ನಿರ್ವಹಿಸುವವರು ಇನ್ನೊಬ್ಬ ಅಧಿಕಾರಿ ಅಥವಾ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವವರೆಗೂ ಬಿಡುಗಡೆ ಆಗಬಾರದು” ಎಂದು ತಿಳಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ, ಚುನಾವಣಾ ಆಯೋಗದ ರಾಜ್ಯ ಮಟ್ಟದ ಸಂಪನ್ಮೂಲ ಅಧಿಕಾರಿ ಶಂಕರ್ ರೆಡ್ಡಿ, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಜಿಲ್ಲಾ ಚುನಾವಣಾ ವೆಚ್ಚ ಅಧಿಕಾರಿ ಎನ್.ಹರೀಶ್, ಜಿಲ್ಲಾ ಉದ್ಯೋಗಾಧಿಕಾರಿ ಎಂ.ಪ್ರಸಾದ್ ಇತರರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.