Mulabagal : ಮುಳಬಾಗಿಲು ತಾಲ್ಲೂಕಿನ ಕುರುಡುಮಲೆ (Kudurumale Ganesha Temple) ಗಣೇಶನಿಗೆ ಶನಿವಾರ ಪೂಜೆ ಸಲ್ಲಿಸಿ, ನಂತರ ಮುಳಬಾಗಿಲು ನಗರದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ (Lokasabha Election) ಪ್ರಚಾರ (Publicity) ಪ್ರಾರಂಭಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ “ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದು, ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. ಎಲ್ಲಾ ಜಾತಿಯ ಜನರು, ಮಧ್ಯಮವರ್ಗದವರು ನಮ್ಮ ಪರವಾಗಿದ್ದಾರೆ. ಏಪ್ರಿಲ್ 26 ರಂದು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಹೈಕಮಾಂಡ್ ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಅವರಿಗೆ ಮತ ಹಾಕಿ ಆಶೀರ್ವದಿಸಿ. ಮೋದಿ ಅವರು 10 ವರ್ಷ ಇದ್ದರೂ ನುಡಿದಂತೆ ನಡೆದಿಲ್ಲ, ಅಚ್ಛೇದಿನ್ ಬರಲೇ ಇಲ್ಲ. ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ 5 ಗ್ಯಾರಂಟಿ ಈಡೇರಿಸಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಪೊಳ್ಳು ಭರವಸೆ ನೀಡಿಲ್ಲ. ಕಳೆದ ಸಾಲಿನಲ್ಲಿ ₹ 36 ಸಾವಿರ ಕೋಟಿಯನ್ನು ಗ್ಯಾರಂಟಿಗಳಿಗೆ ಖರ್ಚು ಮಾಡಿದ್ದೇವೆ. ಈ ಸಾಲಿನಲ್ಲಿ ₹ 52 ಸಾವಿರ ಕೋಟಿಯನ್ನು ಇಟ್ಟಿದ್ದೇವೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಮಾಜಿ ಸಚಿವ ರಮೇಶ್ ಕುಮಾರ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್ ಅಹ್ಮದ್, ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ಎಸ್.ಎನ್.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಮಾಜಿ ಸಚಿವ ಕೆ.ಆರ್.ರಮೇಶ್ ಕುಮಾರ್ ಮತ್ತಿತರರು ಉಪಾಸಿಟರಿದ್ದರು.