Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 12ನೇ ಶತಮಾನದ ವಚನಕಾರ ಮಡಿವಾಳ ಮಾಚಿದೇವರ ಜಯಂತಿಯನ್ನು (Madivala Machideva jayanti) ಆಚರಿಸಲಾಯಿತು.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಆಯೋಜಿಸಲಾಗಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಉದ್ಘಾಟಿಸಿದರು.
ಗೌರಿಬಿದನೂರು:
ಗೌರಿಬಿದನೂರು ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಉದ್ಘಾಟಿಸಿದರು.
ಚಿಂತಾಮಣಿ:
ಚಿಂತಾಮಣಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಚಿಂತಾಮಣಿ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಿತು.
ಶಿಡ್ಲಘಟ್ಟ:
ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಮಡಿವಾಳ ಸಮುದಾಯದ ವತಿಯಿಂದ ಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಯಿತು.
ಸಾದಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಮಡಿವಾಳ ಮಾಚಿದೇವ ಜಯಂತಿ ನಡೆಯಿತು.
ಗುಡಿಬಂಡೆ:
ಗುಡಿಬಂಡೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಮಡಿವಾಳ ಮಾಚಿದೇವ ಜಯಂತಿ ಆಚರಿಸಲಾಯಿತು.