Chikkaballapur : ಚಿಕ್ಕಬಳ್ಳಾಪುರ ನಗರದ ಜೈಭೀಮ್ ಮೆಮೋರಿಯಲ್ ಹಾಸ್ಟೆಲ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಬುಧವಾರ ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನದ (Mahaparinirvan Diwas) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗೌರಿಬಿದನೂರು:

ಗೌರಿಬಿದನೂರು ನಗರದ ಹೊರವಲಯದಲ್ಲಿರುವ ಅಂಬೇಡ್ಕರ್ ಸಮಾನತಾ ಸೌಧದ ಮುಂಭಾಗದಲ್ಲಿ ಬುಧವಾರ ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆ ನಡೆಯಿತು.