Home News Manchenahalli ಮಂಚೇನಹಳ್ಳಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಮಂಚೇನಹಳ್ಳಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

0
Manchehnahalli bandh

Manchehnahalli : ಮಂಚೇನಹಳ್ಳಿ ತಾಲ್ಲೂಕಿನ ಕನಗಾನಕೊಪ್ಪ ಗ್ರಾಮದಲ್ಲಿ ಗಣಿಗಾರಿಕೆ ಮಾಡಲು ಅನುಮತಿ ನೀಡಿರುವ ಕುರಿತು ವಿರೋಧ ವ್ಯಕ್ತವಾಗಿದ್ದು, ಭಾರಿ ಪ್ರತಿಭಟನೆಯ ನಡುವೆ ಸೋಮವಾರ ನಡೆದ ಮಂಚೇನಹಳ್ಳಿ ಬಂದ್‌ಗೆ (bandh) ಉತ್ತಮ ಪ್ರತಿಕ್ರಿಯೆ ದೊರೆತಿದೆ.

ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ವೈ.ಎ. ನಾರಾಯಣಸ್ವಾಮಿ ಅವರ ಪತ್ನಿ ಉಷಾ ನಂದಿನಿಗೆ ನೀಡಲಾದ ಗಣಿಗಾರಿಕೆ ಅನುಮತಿ ರದ್ದುಗೊಳಿಸಬೇಕು ಮತ್ತು ರೈತರ ಮೇಲೆ ಗುಂಡು ಹಾರಿಸಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಆಗ್ರಹದೊಂದಿಗೆ ಬಂದ್ ಕರೆ ನೀಡಲಾಗಿತ್ತು.

ಬಂದ್ ಹಿನ್ನೆಲೆ ತಾಲ್ಲೂಕು ಕೇಂದ್ರ ಮಂಚೇನಹಳ್ಳಿಯ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿತ್ತು. ಅಂಗಡಿಗಳು ಬಾಗಿಲು ಹಾಕಿದ್ದರೆಲ್ಲಾ, ಮೆಡಿಕಲ್ ಅಂಗಡಿಗಳು ಮತ್ತು ಆಸ್ಪತ್ರೆಗಳು ಮಾತ್ರ ತೆರೆಯಲ್ಪಟ್ಟಿದ್ದವು. ನಗರದಲ್ಲಿ ಸಂಚಾರ ವ್ಯವಸ್ಥೆ ಮಾತ್ರ ಸಹಜವಾಗಿ ಮುಂದುವರಿಯಿತು.

ಬಸ್ ನಿಲ್ದಾಣ ಬಳಿ ನಡೆದ ಬಹಿರಂಗ ಸಮಾವೇಶದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ, ರೈತ ಸಂಘದ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು. ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರೂ ಕಾರ್ಯಕ್ರಮದಲ್ಲಿ ಹಾಜರಿದ್ದು, ಗಣಿಗಾರಿಕೆಯನ್ನು ತೀವ್ರವಾಗಿ ವಿರೋಧಿಸಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version