- Advertisement -
- Advertisement -
- Advertisement -
- Advertisement -
Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಹನುಮಂತಪುರದ ಮಾತಾ ಕೌಮಾರಿದೇವಿ ರಥೋತ್ಸವವನ್ನು (Mata Kaumari Devi Rathotsava) ಮಾತಾ ಮಹಾದೇವಿ ಭಕ್ತಮಂಡಳಿಯಿಂದ ಸೋಮವಾರ ಅದ್ಧೂರಿಯಾಗಿ ನೆರವೇರಿಸಲಾಯಿತು.
ಜಿಲ್ಲೆ ಸೇರಿದಂತೆ ಹಲವು ಕಡೆಗಳಿಂದ ರಥೋತ್ಸವಕ್ಕೆ ಬಂದಿದ್ದ ಭಕ್ತರು ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಿಗೆ ಪಂಚಾಮೃತ ಅಭಿಷೇಕ, ಮಂಗಳಾರತಿ ಸೇರಿದಂತೆ ವಿಶೇಷ ಧಾರ್ಮಿಕ ಕೈಂಕರ್ಯಗಳು ನಡೆಸಲಾಯಿತು. ಕೌಮಾರಿದೇವಿ ಮೂರ್ತಿಯನ್ನು ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಿ, ಮಂಗಳವಾದ್ಯಗಳೊಂದಿಗೆ ಊರಿನಲ್ಲಿ ಪ್ರದಕ್ಷಿಣೆ ಮಾಡಲಾಯಿತು.
ರಥೋತ್ಸವ ಅಂಗವಾಗಿ ಭಕ್ತರಿಗೆ ತೀರ್ಥ, ಪ್ರಸಾದ, ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.
For Daily Updates WhatsApp ‘HI’ to 7406303366
- Advertisement -