Melur, Sidlaghatta : ಸಂವಿದಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ರಚಿಸಿರುವ ಸಂವಿದಾನದ ಆಶಯ ಹಾಗು ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಜೆಡಿಎಸ್ ಮುಖಂಡ ಬಿ.ಎನ್.ಸಚಿನ್ ಹೇಳಿದರು.
ತಾಲ್ಲೂಕಿನ ಮೇಲೂರು ಗ್ರಾಮಕ್ಕೆ ಮಂಗಳವಾರ ಆಗಮಿಸಿದ ಸಂವಿಧಾನ ಜಾಗೃತಿ ರಥವನ್ನು ಬರ ಮಾಡಿಕೊಂಡು ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ನಮ್ಮ ಡಾ.ಬಿ.ಆರ್.ಅಂಬೇಡ್ಕರ್ ಅವರು ನಮಗೆ ನೀಡಿದ್ದು ಅದರಿಂದಲೆ ಈ ಸಮಾಜದ ಎಲ್ಲ ಜನರೂ ನೆಮ್ಮದಿಯ ಬದುಕನ್ನು ನಡೆಸುವಂತಾಗಿದೆ. ಸಂವಿಧಾನದ ಮಹತ್ವ ಹಾಗು ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಸೇರಿದಂತೆ ರಾಷ್ಟ್ರೀಯ ಏಕತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ನಡೆಯುತ್ತಿದೆ. ದೇಶದ ಜನತೆಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳು ಹಾಗು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸುವ ವಿಭಿನ್ನ ಕಾರ್ಯಕ್ರಮ ಇದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋದಿಸಲಾಯಿತು. ಜಾಗೃತಿ ಜಾಥಾ ಮೆರವಣಿಗೆಯಲ್ಲಿ ನೂರಾರು ಮಂದಿ ಗ್ರಾಮಸ್ಥರು ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕ, ಶಿಕ್ಷಕಿಯರು, ಅಂಗನವಾಡಿ ಹಾಗು ಆಶಾ ಕಾರ್ಯಕರ್ತೆಯರು ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ತಾ.ಪಂ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಮೇಲೂರು ಗ್ರಾ.ಪಂ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಶಿವಾನಂದ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮಂಜುನಾಥ್, ದಸಂಸ ಜಿಲ್ಲಾ ಸಂಚಾಲಕ ಎನ್.ಎ.ವೆಂಕಟೇಶ್, ಆರೋಗ್ಯಾಧಿಕಾರಿ ಡಾ.ರಮೇಶ್, ಗ್ರಾ.ಪಂ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್, ಗ್ರಾ.ಪಂ ಸದಸ್ಯರಾದ ಎಂ.ಕೆ.ರವಿಪ್ರಸಾದ್, ಎಂ.ಜೆ.ಶ್ರೀನಿವಾಸ್, ಗಜೇಂದ್ರ, ದೇವರಾಜ್, ಗುಂಡಣ್ಣ, ಮುನಿಶಾಮಯ್ಯ, ಶ್ರೀನಿವಾಸ್, ಪಿಡಿಓ ಅಂಜನ್ ಕುಮಾರ್, ಕಾರ್ಯದರ್ಶಿ ಶ್ರೀನಿವಾಸರೆಡ್ಡಿ, ಪ್ರೌಡಶಾಲೆ ಮುಖ್ಯೋಪಾಧ್ಯಾಯ ಭಾಸ್ಕರ್, ಮತ್ತಿತರರು ಹಾಜರಿದ್ದರು.