Home Sidlaghatta ಮೇಲುರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೇಲುರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

0
481

Melur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಶಶಿಕಲಾ ರಮೇಶ್ ಹಾಗೂ ಉಪಾಧ್ಯಕ್ಷರಾಗಿ ಎಂ.ಶಿವಾನಂದ ಆಯ್ಕೆಯಾಗಿದ್ದಾರೆ.

ಒಟ್ಟು 15 ಸದಸ್ಯ ಬಲ ಹೊಂದಿರುವ ಮೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಹಿಂದುಳಿದ ವರ್ಗ ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಸ್‌.ಸಿ ಮೀಸಲು ನಿಗದಿಪಡಿಸಲಾಗಿದ್ದು ಬುಧವಾರ ಚುನಾವಣೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಮರನಾರಾಯಣ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಗ್ರಾ.ಪಂ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್, ಮಾಜಿ ಉಪಾಧ್ಯಕ್ಷೆ ವನಿತಾ ತಿರುಮಲೇಶ್, ಸದಸ್ಯರಾದ ಎಂ.ಕೆ.ರವಿಪ್ರಸಾದ್, ಎಂ.ಜೆ.ಶ್ರೀನಿವಾಸ್, ಸಿ.ಗಜೇಂದ್ರ, ದೇವರಾಜ್, ನಾರಾಯಣಸ್ವಾಮಿ, ಭಾಗ್ಯಮ್ಮ ಶಿವಕುಮಾರ್, ಸವಿತಾ ಗೋಪಾಲರೆಡ್ಡಿ, ಶೋಭಾ ಹರೀಶ್, ಗೀತಾಂಜಲಿ ತಿಲಕ್, ಅಂಬಿಕಾ ನಾಗೇಶ್, ಕಮಲಮ್ಮ, ಪಿಡಿಓ ಶಾರದ, ಕಾರ್ಯದರ್ಶಿ ಶ್ರೀನಿವಾಸರೆಡ್ಡಿ ಹಾಜರಿದ್ದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!