Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾಧಿಕಾರಿ (Deputy Commissioner) ಪಿ.ಎನ್.ರವೀಂದ್ರ ನೇತೃತ್ವದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ರಾಗಿ ಖರೀದಿ (Minimum Support Price) ಕುರಿತ ಪೂರ್ವ ಸಿದ್ಧತಾ ಸಭೆ ನಡೆಯಿತ್ತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ “ಡಿಸಂಬರ್ 1 ರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗಾಗಿ ನೋಂದಣಿ ಕಾರ್ಯ ಜಿಲ್ಲೆಯಲ್ಲಿ ನಡೆಯಲಿದ್ದು ರೈತರು ಸದರಿ ಅವಧಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಮೊದಲು ನೋಂದಣಿಗೊಂಡವರಿಗೆ ಮೊದಲ ಆದ್ಯತೆ ಸಿಗಲಿದೆ. ನೋಂದಣಿದಾರರ ಜೇಷ್ಠತೆಯನ್ನು ರಾಜ್ಯ ಮಟ್ಟದಲ್ಲಿ ನಿರ್ಧರಿಸಲಾಗುತ್ತದೆ. ನೋಂದಣಿಗೊಂಡ ರೈತರಿಂದ 2024ರ ಜನವರಿ1 ರಿಂದ ಮಾರ್ಚ್ 31 ರವರೆಗೆ ರಾಗಿ ಖರೀದಿಸಲಾಗುವುದು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ನೋಂದಣಿ ಹಾಗೂ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಕೃಷಿ, ಆಹಾರ, ಕಾನೂನು ಮಾಪನ ಇಲಾಖೆ ಮತ್ತು ಸಹಕಾರ ಮಾರಾಟ ಮಂಡಳಿ ಅಧಿಕಾರಿಗಳು, ಸಿಬ್ಬಂದಿ ಒಳಗೊಂಡ ತಂಡ ರಚಿಸಿ, ನಿಯಮಿತವಾಗಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕು” ಎಂದು ತಿಳಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಜಂಟಿ ನಿರ್ದೇಶಕಿ ಪಿ.ಸವಿತಾ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಜಾವೀದ ನಸೀಮಾ ಖಾನಂ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
[…] […]