Sidlaghatta : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೇಷ್ಮೆ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳಿಗೆ ಹೆಸರು ನೋಂದಾಯಿಸಿಕೊಳ್ಳಲು ರೈತರಲ್ಲಿ ರೇಷ್ಮೆ ಸಹಾಯಕ ನಿರ್ದೇಶಕ ಎಂ.ಸಿ.ಚಂದ್ರಪ್ಪ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ನ.16ರಿಂದ29 ರವರೆಗೂ ಗ್ರಾಮ ಪಂಚಾಯಿತಿವಾರು ಗ್ರಾಮ ಸಭೆಗಳು ನಡೆಯಲಿದ್ದು ಹಿಪ್ಪುನೇರಳೆ ನರ್ಸರಿ ಆರಂಭಿಸುವವರು, ಹೊಸದಾಗಿ ಜೋಡಿ ಸಾಲು ಪದ್ದತಿಯ ಹಿಪ್ಪುನೇರಳೆ ನಾಟಿ ಮಡುವವರು ಹಾಗೂ ಮರಪದ್ದತಿಯಲ್ಲಿ ಹಿಪ್ಪುನೇರಳೆ ನಾಟಿ ಮಾಡುವ ರೈತರು ತಮ್ಮ ಹೆಸರುಗಳನ್ನು ನೋಂದಾಯಿಸಲು ಕೋರಿದ್ದಾರೆ.
ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಗ್ರಾಮ ಸಭೆಗಳಲ್ಲಿ ನರೇಗಾ ಯೋಜನೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಿ ಕ್ರಿಯಾ ಯೋಜನೆ ತಯಾರಿಸಿ ಅನುಮೋದಿಸಲಾಗುವುದು.
ಆದ್ದರಿಂದ ಆಸಕ್ತ ಹಾಗೂ ಅರ್ಹ ರೈತರು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಸಭೆ ನಡೆಯುವುದಕ್ಕೂ ಮುನ್ನ ಅಥವಾ ರೇಷ್ಮೆ ಇಲಾಖೆಯ ತಾಂತ್ರಿಕ ಸೇವಾ ಕೇಂದ್ರ ಕಚೇರಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಇಲ್ಲವಾದಲ್ಲಿ ರೇಷ್ಮೆ ಇಲಾಖೆಯಿಂದ ನರೇಗಾ ಯೋಜನೆಯಡಿ ಸಿಗುವ ಸವಲತ್ತುಗಳು ಸಿಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಎಂ.ಸಿ.ಚಂದ್ರಪ್ಪ, ಸಹಾಯಕ ನಿರ್ದೇಶಕರು, ರೇಷ್ಮೆಇಲಾಖೆ, ಮೊ.ನಂ.94483 50272 ಸಂಪರ್ಕಿಸಲು ಕೋರಿದ್ದಾರೆ.