Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ನೇತೃತ್ವದಲ್ಲಿ ಮುಂಗಾರು ಪೂರ್ವಸಿದ್ಧತಾ ಸಭೆ (Monsoon preparatory meeting) ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು “ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇದ್ದು ಮುಂಗಾರು ಪೂರ್ವಸಿದ್ಧತಾ ಕಾರ್ಯಗಳನ್ನು ನಿರ್ವಹಿಸಬೇಕಿದೆ. ಮೇ ಆರಂಭದಿಂದಲೇ ಮಳೆ ಪ್ರಮಾಣ ಜಿಲ್ಲೆಯಲ್ಲಿ ಉತ್ತಮವಾಗಿದ್ದು ಈವರೆಗೆ 26 ಮಿ.ಮೀ ವಾಡಿಕೆ ಮಳೆ ಬೀಳಬೆಕಿತ್ತು. ಆದರೆ 2 ಮಿ.ಮೀ ಮಳೆಯಾಗಿದೆ. ಶೇ 93 ರಷ್ಟು ಮಳೆ ಕೊರತೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ. ಮಳೆ ಹಾನಿಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕಿದೆ” ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್. ಭಾಸ್ಕರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.