25.3 C
Bengaluru
Friday, October 18, 2024

ಬೃಹತ್ ಉದ್ಯೋಗ ಮತ್ತು ಸಾಲ ಮೇಳ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ನಗರದ ಸಂತ ಜೋಸೆಫರ ಶಾಲೆ ಆವರಣದಲ್ಲಿ ಶನಿವಾರ ಎಂ.ಎಸ್. ರಾಮಯ್ಯ ಯೂತ್ ಫೌಂಡೇಶನ್‌ನಿಂದ (MS Ramaiah Youth Foundation) ನಡೆದ ಬೃಹತ್ ಉದ್ಯೋಗ ಮತ್ತು ಸಾಲ ಮೇಳದಲ್ಲಿ (Job and Loan Fair) 114 ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಿ ಸ್ಥಳದಲ್ಲಿಯೇ 1,500ಕ್ಕೂ ಹೆಚ್ಚು ಮಂದಿಗೆ ಉದ್ಯೋಗದ ಅವಕಾಶಗಳನ್ನು ನೀಡಲಾಯಿತು.

ಎಂ.ಎಸ್. ರಾಮಯ್ಯ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಯುವ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.‌ ರಕ್ಷಾ ರಾಮಯ್ಯ ಈ ಸಂದರ್ಭದಲ್ಲಿ ಮಾತನಾಡಿ “ಸ್ವಾತಂತ್ರ್ಯ ನಂತರದಲ್ಲಿ ಅತಿ ಹೆಚ್ಚು ನಿರುದ್ಯೋಗ ಸಮಸ್ಯೆ ಇದೀಗ ನಿರ್ಮಾಣವಾಗಿದ್ದು ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚುತ್ತಿದ್ದರು ಉದ್ಯೋಗ ದೊರಕಿಸಿಕೊಡಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿಲ್ಲ. ಉದ್ಯೋಗ ಸಿಗದವರು ನಿರಾಶರಾಗಬೇಕಿಲ್ಲ ಚಿಕ್ಕಬಳ್ಳಾಪುರದಲ್ಲಿ ನಿರಂತರವಾಗಿ ಉದ್ಯೋಗ ಮೇಳಗಳನ್ನು ಆಯೋಜಿಸಿ ನಿರುದ್ಯೋಗ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸಿಕೊಡಲು ಒತ್ತು ನೀಡಿದ್ದೇವೆ. ಇದಕ್ಕಾಗಿ ವಾಟ್ಸ್‌ಆ್ಯಪ್ ಚಾಟ್ ಮತ್ತು ಪ್ರತ್ಯೇಕ ಸಹಾಯವಾಣಿ ತೆರೆಯಲಾಗಿದ್ದು ಚಿಕ್ಕಬಳ್ಳಾಪುರದ ಎಲ್ಲಾ ಜನಪ್ರತಿನಿಧಿಗಳು ಸೇರಿದಂತೆ ಎಲ್ಲರ ಸಹಕಾರದಿಂದ ಮುಂಬರುವ ದಿನಗಳಲ್ಲಿ ಉದ್ಯೋಗ ಮೇಳಗಳನ್ನು ಇನ್ನಷ್ಟು ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಸಲಾಗುವುದು” ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್, ಸೂಸೆಪಾಳ್ಯ ಚರ್ಚ್ ಪಾದ್ರಿ ಡ್ಯಾನಿಯಲ್, ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ ಧರ್ಮಗುರು ಅಲ್ಬನ್ ಜಿಯೊ, ಪ್ರಾಂಶುಪಾಲರಾದ ಭಾರತಿ, ಕಾಂಗ್ರೆಸ್ ನಾಯಕಿ ಮಮತಾ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!