Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಆಶ್ರಯದಲ್ಲಿ ಬುಧವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿ (Muddenahalli) ಮಹಿಳಾ ಸಬಲೀಕರಣ ಕಾನೂನು ಅರಿವು ಕಾರ್ಯಕ್ರಮ (Women Empowerment Legal Awareness Programme) ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿ. ರಾಜಶೇಖರ್ “ವಿದ್ಯಾರ್ಥಿಗಳಿಗೆ ಕಾನೂನಿನಲ್ಲಿರುವ ನಿಯಮಗಳನ್ನು ಅರಿತುಕೊಳ್ಳಬೇಕು. ವಾಹನ ಚಲಿಸುವಾಗ ವಾಹನ ಚಾಲನಾಪತ್ರ, ವಾಹನ ವಿಮೆ, ಹೊಗೆ ನಿಯಂತ್ರಣ ಪತ್ರಗಳನ್ನು ಕಡ್ಡಾಯವಾಗಿ ಮಾಡಿಸಿ ಇರಿಸಿಕೊಂಡಿರಬೇಕು ಹಾಗೂ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶೆ ಎ.ಅರುಣಾಕುಮಾರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮಿಕಾಂತ್ ಜೆ.ಮಿಸ್ಕಿನ್, ವಕೀಲರ ಸಂಘದ ಅಧ್ಯಕ್ಷ ಆರ್. ಶ್ರೀನಿವಾಸ್, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.