Mulabagilu : ಮುಳಬಾಗಿಲು ನಗರದ ಹೊರವಲಯದ ಶಾಸಕ ಸಮೃದ್ಧಿ ಮಂಜುನಾಥ್ ಅವರ ತೋಟದ ಮನೆಯ ಬಳಿ ಬುಧವಾರ BJP–JDSನ ಮುಖಂಡರು ಹಾಗೂ ಕಾರ್ಯಕರ್ತರ ಸಮನ್ವಯ ಸಭೆ (Coordination Meeting)ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಸಂಸದ ಎಸ್.ಮುನಿಸ್ವಾಮಿ “ಕೊರೊನಾ ಸಮಯದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಪಕ್ಷಬೇಧ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಚುಚ್ಚುಮದ್ದು ಹಾಕದೆ ಇದ್ದಿದ್ದರೆ ಇಷ್ಟೊತ್ತಿಗೆ ಸಿದ್ದರಾಮಯ್ಯ ಸಾಯುತ್ತಿದ್ದರು. 60 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಎಲ್ಲರನ್ನೂ ಯಮಾರಿಸುತ್ತಾ ಬಂದಿತ್ತು. ಆದರೆ, ಮೋದಿ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿಯೂ ಮೋದಿ ಅವರನ್ನೇ ಪ್ರಧಾನಮಂತ್ರಿಯನ್ನಾಗಿ ಮಾಡಲು ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿ” ಎಂದು ಹೇಳಿದರು.
ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು, ಶಾಸಕ ಸಮೃದ್ಧಿ ಮಂಜುನಾಥ್, ಶೀಗೆಹಳ್ಳಿ ಸುಂದರ್, ಕಾಡೇನಹಳ್ಳಿ ನಾಗರಾಜ್, ಸುರೇಂದ್ರ ಗೌಡ, ರಘುಪತಿ ರೆಡ್ಡಿ, ಶ್ರೀನಿವಾಸ ರೆಡ್ಡಿ, ಪ್ರಕಾಶ್, ಗೊಲ್ಲಹಳ್ಳಿ ಜಗದೀಶ್, ವಾಸು, ಕಾಪರ್ತಿ ಅಮರ್, ತೊಂಡಹಳ್ಳಿ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.