Mulabagilu : ಮುಳಬಾಗಿಲು ತಾಲ್ಲೂಕಿನ ತಾಯಲೂರು ಗ್ರಾಮದ ಪುರಾಣ ಪ್ರಸಿದ್ಧ ಕಾಶಿ ವಿಶ್ವೇಶ್ವರ ಸ್ವಾಮಿ (Kasi Vishweshwara Rathotsava) ಬ್ರಹ್ಮ ರಥೋತ್ಸವ ಮಂಗಳವಾರ ಅದ್ದೂರಿಯಾಗಿ ನಡೆಯಿತು.
ರಥೋತ್ಸವ ಪ್ರಯುಕ್ತ ದೇವಾಲಯದಲ್ಲಿ ಅಭಿಷೇಕ, ಹೋಮ, ಕಳಶಾರಾಧನೆ, ಮಹಾ ಮಂಗಳಾರತಿ, ಪಂಚಾಮೃತ, ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆದವು ಮತ್ತು ದೇವರ ಮೂಲ ವಿಗ್ರಹವನ್ನು ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಿ ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಸುತ್ತಮುತ್ತಲಿನ ಗ್ರಾಮ ಹಾಗೂ ನೆರೆಯ ಆಂಧ್ರಪ್ರದೇಶದಿಂದಲೂ ಸಾವಿರಾರು ಭಕ್ತರು ಆಗಮಿಸಿದ್ದರು.